ಕಲ್ಪ ಮೀಡಿಯಾ ಹೌಸ್ | ಸಾಗರ |
ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ Harathalu Halappa ಅವರು ಇಂದು ತಮ್ಮ ನಾಮಪತ್ರ ಸಲ್ಲಿಸುತ್ತಿದ್ದು, ಇದಕ್ಕೂ ಮುನ್ನ ನಡೆದ ಬೃಹತ್ ಮೆರವಣಿಗೆಗೆಗೆ ಜನಸಾಗರವೇ ಹರಿದುಬಂದಿದೆ.
ಐತಿಹಾಸಿಕ ಪ್ರಸಿದ್ದ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು, ಅಲ್ಲಿಂದ ಮೆರವಣಿಗೆಯಲ್ಲಿ ತೆರಳಿದರು. ಡೊಳ್ಳು ಕುಣಿತ ಸೇರಿದಂತೆ ವಿವಿಧ ವೃಂದಗಳು ಪಾಲ್ಗೊಂಡಿದ್ದವು.
ಮೆರವಣಿಗೆಯಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದು, ಕ್ಷೇತ್ರದಲ್ಲಿ ಹಾಲಪ್ಪನವರ ಶಕ್ತಿ ಪ್ರದರ್ಶನವೂ ಸಹ ಆದಂತಾಗಿದೆ.
ಮೆರವಣಿಗೆಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮೊನ್ನೆಯಷ್ಟೇ ಬಿಜೆಪಿ ಸೇರಿದ ರಾಜನಂದಿನಿ ಸೇರಿದಂತೆ ಹಲವು ಪಾಲ್ಗೊಂಡಿದ್ದರು.
ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಹರತಾಳು ಹಾಲಪ್ಪ ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ಇದಕ್ಕೂ ಮುನ್ನ ಧನಾಂಜನೇಯ ಸ್ವಾಮಿಗೆ ಕುಟುಂಬ ಸಹಿತ ವಿಶೇಷ ಪೂಜೆ ಸಲ್ಲಿಸಿದರು.
Also read: ಶಿವಮೊಗ್ಗದಲ್ಲಿ ಹಿಟ್ ಅಂಡ್ ರನ್: ಸವಾರ ಸಾವು, ಇನ್ನಿಬ್ಬರಿಗೆ ಗಾಯ
ಹೊಳೆಕೊಪ್ಪದಲ್ಲಿರುವ ಧನಾಂಜನೇಯ ಸ್ವಾಮಿ ದೇವಾಲಯಕ್ಕೆ ಕುಟುಂಬ ತೆರಳಿದ ಹಾಲಪ್ಪ, ಶ್ರೀಸ್ವಾಮಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಇನ್ನು, ನಿನ್ನೆ ರಿಪ್ಪನ್’ಪೇಟೆಯ ಶ್ರೀಸಿದ್ದವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಹಾಲಪ್ಪನವರು ಈ ಮೂಲಕ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















