ಕಲ್ಪ ಮೀಡಿಯಾ ಹೌಸ್
ಸಾಗರ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಶಾಸಕ ಹೆಚ್.ಹಾಲಪ್ಪ ಅವರು ನಗರಸಭೆ ತುರ್ತು ಸಭೆ ಕರೆದು, ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಪಿಡಿಒಗಳೊಂದಿಗೆ ಸಭೆ ನಡೆಸಿ, ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು, ಭಾನುವಾರ ದಿಂದ ಬುಧವಾರವರೆಗೆ ನಾಲ್ಕು ದಿನಗಳ ಕಾಲ ಹಾಲು, ಪೆಟ್ರೋಲ್ ಬಂಕ್, ಮೆಡಿಕಲ್ ಶಾಪ್ ಹೊರತುಪಡಿಸಿ ಉಳಿದ ಯಾವುದೇ ವಹಿವಾಟುಗಳನ್ನು ನಡೆಸುವಂತಿಲ್ಲ. ಅನಗತ್ಯವಾಗಿ ತಿರುಗುವವರ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರು ಕೊರೋನವನ್ನು ಹಿಮ್ಮೆಟ್ಟಿಸುವಲ್ಲಿ ಸಹಕರಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್, ನಗರಸಭೆ ಆಯುಕ್ತರು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post