ಕಲ್ಪ ಮೀಡಿಯಾ ಹೌಸ್ | ಸಾಗರ |
ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ Car hits woman ಹೊಡೆದು ಪರಾರಿಯಾಗಿರುವ ಘಟನೆ ತಾಲೂಕಿನ ಆನಂದಪುರ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ನಡೆದಿದೆ.
ಬಸ್ ನಿಲ್ದಾಣದ ಎದುರು ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರೊಂದು ವೇಗವಾಗಿ ಬಂದಿದ್ದು, ಆಕೆಗೆ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ತಕ್ಷಣ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾರು ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಆರೋಗ್ಯ ಸ್ಥಿತಿ ಕುರಿತಾಗಿ ಮಾಹಿತಿ ಲಭ್ಯವಾಗಿಲ್ಲ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಡಿಕ್ಕಿ ಹೊಡೆದು ಪರಾರಿಯಾದ ಕಾರು ಮತ್ತು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















