ಕಲ್ಪ ಮೀಡಿಯಾ ಹೌಸ್
ಸಾಗರ: ತಾಲೂಕಿನ ಎಲ್‌ಬಿ ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ, ಸಂಸದ ಬಿ.ವೈ ರಾಘವೇಂದ್ರ ಹಾಗೂ ಶಾಸಕ ಹಾಲಪ್ಪ ಉಪಸ್ಥಿತಿಯಲ್ಲಿ ಕೋವಿಡ್-19 ನಿರ್ವಹಣೆಯ ಕುರಿತು ಅಧಿಕಾರಿಗಳ ಸಭೆ ನಡೆಯಿತು.
ಎರಡನೆಯ ಹಂತದ ಲಸಿಕೆ ಪಡೆಯಲು ಗ್ರಾಮಾಂತರ ಪ್ರದೇಶದಿಂದ ಬಂದ ಅನೇಕರು ಲಸಿಕೆ ಸಿಗದೆ ವಾಪಸ್ಸಾದ ಘಟನೆ ನಡೆಯಿತು. ಲಸಿಕೆಯ ಕೊರತೆಯಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಅಥವಾ ಫೋನ್ ಮೂಲಕ ಮುಂಚಿತವಾಗಿ ಮಾಹಿತಿ ನೀಡಿದಲ್ಲಿ, ಜನಸಾಮಾನ್ಯರು ಲಸಿಕಾ ಕೇಂದ್ರಕ್ಕೆ ಬಂದು ವಾಪಾಸಾಗುವುದು ತಪ್ಪುತ್ತದೆ ಎಂಬ ಅಭಿಪ್ರಾಯ ಕೇಳಿ ಬಂದಿತು.
ಸಾಗರ ಉಪವಿಭಾಗಿಯ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ (ಪ್ರತ್ಯೇಕವಾಗಿ) ಮಾಡಿರುವುದರಿಂದ ಹೆಚ್ಚು ಸಿಬ್ಬಂದಿ ಅವಶ್ಯಕತೆಯಿದೆ ಶೀಘ್ರದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಎಎಸ್‌ಪಿ, ಸಿಇಒ, ಡಿಹೆಚ್‌ಒ, ಟಿಹೆಚ್‌ಒ, ಚುನಾಯಿತ ಪ್ರನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post