ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ ಲೇಲ್ಯಾಂಡ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ನಂತರ ಆನಂದಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post