ಕಲ್ಪ ಮೀಡಿಯಾ ಹೌಸ್
ಸಾಗರ: ಶುಕ್ರವಾರ ಮತ್ತು ಶನಿವಾರ ಅಗತ್ಯ ವಸ್ತುಗಳ ಖರೀದಿಗೆ ತಾಲ್ಲೂಕು ಆಡಳಿತ ಅವಕಾಶ ನೀಡಿದ್ದು, ಬೆಳಗ್ಗೆ 5 ರಿಂದ 8:30ರವರೆಗೆ ಮಾತ್ರ ಅವಕಾಶ ನೀಡಲಾಗಿದೆ.
ತಳ್ಳುವ ಗಾಡಿಯಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅನುಮತಿ ಇದ್ದು, ಕುರಿ, ಕೋಳಿ ಮತ್ತು ಮೀನು ಮಾರಾಟಕ್ಕೂ ಅವಕಾಶ ಮಾಡಿಕೊಟ್ಟಿದ್ದು, ಆದಷ್ಟೂ ಹೋಂ ಡೆಲಿವರಿಗೆ ಹೆಚ್ಚು ಒತ್ತು ಕೊಡುವಂತೆ ತಿಳಿಸಿದೆ.
ಗೊಬ್ಬರ, ಭಿತ್ತನೆ ಬೀಜ ವಿತರಿಸುವ ಖಾಸಗಿ ಅಂಗಡಿ ಮಾಲೀಕರಿಗೆ ನಾಳೆ ಅವಕಾಶ ಇರುವುದಿಲ್ಲ. ಹಾಗೂ ಜಿಲ್ಲಾಡಳಿತದ ಸಭೆಯ ನಂತರ ಉಪವಿಭಾಗಾಧಿಕಾರಿಗಳು ಪೂರ್ಣ ಮಾಹಿತಿ ನೀಡಲಿದ್ದು, ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post