ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29), ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ. 25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ.
ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.
Also read: ಟ್ರಾಫಿಕ್ ಪೊಲೀಸ್’ಗೆ ಡಿಕ್ಕಿ ಹೊಡೆದು ಎಳೆದೊಯ್ದ ಪ್ರಕರಣ | ಡ್ರೈವರ್ ಅರೆಸ್ಟ್
ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಶಕುಂತಲಾ ಅವರು ಸಿರವಂತೆ ಶಾಲೆಯಲ್ಲಿ ಇಂಗ್ಲಿಷ್ ಬೋಧಿಸುತ್ತಿದ್ದರು. ಕಳೆದ ವರ್ಷವಷ್ಟೆ ಶಿಕ್ಷಣ ಇಲಾಖೆಗೆ ನೇಮಕಾತಿಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post