ಕಲ್ಪ ಮೀಡಿಯಾ ಹೌಸ್
ಸಾಗರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿ ಎಸ್. ಸನ್ಮತಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಇಂಗ್ಲೀಷ್, ಸಂಸ್ಕೃತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತಶಾಸ್ರದಲ್ಲಿ ತಲಾ 100 ಅಂಕಗಳನ್ನು ಪಡೆದುಕೊಂಡು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಇವರು ಸಾಗರದ ಶ್ರೀಕಾಂತ ರಾವ್, ಶಿಕ್ಷಕಿ ಎಮ್. ಸರಸ್ವತಿ ಇವರ ಸುಪುತ್ರಿಯಾಗಿದ್ದಾರೆ.

ಕಾಲೇಜು ಬೋಧಕ ವೃಂದ, ಆಡಳಿತ ಮಂಡಳಿ, ಸಾಗರ ತಾಲ್ಲೂಕು ಧ್ವನಿ ಬೆಳಕು ಶಾಮಿಯಾನ ಮಾಲೀಕರ ಸಂಘದ ಪದಾಧಿಕಾರಿಗಳು ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















