ಕಲ್ಪ ಮೀಡಿಯಾ ಹೌಸ್ | ಸಾಗರ |
ಬೈಕ್, ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ #Serial Road Accident ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ನಿವಾಸಿ, ಸಾಫ್ಟ್’ವೇರ್ ಇಂಜಿನಿಯರ್ ಸುಧೀರ್(42) ಹಾಗೂ ಸಾಗರ ಆಟೋ ಚಾಲಕ ರಾಘವೇಂದ್ರ(48) ಎಂದು ಗುರುತಿಸಲಾಗಿದೆ.
Also read: ಶಿಕಾರಿಪುರ | ಕ್ಷುಲ್ಲಕ ಕಾರಣಕ್ಕೆ ಗಲಾಟೆ | ಯುವಕನಿಗೆ ಚಾಕು ಇರಿತ
ಬೈಕ್’ನಲ್ಲಿ ತೆರಳುತ್ತಿದ್ದ ಓರ್ವರು ಮತ್ತು ಆಟೋದಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಓರ್ವ ವಯಸ್ಕರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
ಬೈಕ್, ಕಾರು ಹಾಗೂ ಆಟೋದ ನಡುವೆ ಈ ಅವಘಡ ಸಂಭವಿಸಿದೆ. ಸಾಫ್ಟ್’ವೇರ್ ಇಂಜಿನಿಯರ್ ಸುಧೀರ್ ಅವರು ಸಾಗರದ ಕಡೆಯಿಂದ ಶಿವಮೊಗ್ಗದೆಡೆಗೆ ಆಗಮಿಸುತ್ತಿದ್ದರು ಎಂದು ಹೇಳಲಾಗಿದೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post