ಕಲ್ಪ ಮೀಡಿಯಾ ಹೌಸ್ | ಸಾಗರ |
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಬಸ್ ಸಿಗಂದೂರು ಬಳಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಶಾಲಾ ಮಕ್ಕಳು ಹಾಗೂ ಶಿಕ್ಷಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ಸುಮಾರು 50 ಮಕ್ಕಳು, 11 ಶಿಕ್ಷಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, 20 ಕ್ಕೂ ಹೆಚ್ಚು ಮಕ್ಕಳು ಹಾಗೂ 8 ಶಿಕ್ಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಓರ್ವ ಬಾಲಕನಿಗೆ ತೀವ್ರ ಸ್ವರೂಪದ ಗಾಯವಾಗಿದ್ದು ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.
Also read: ಗಮನಿಸಿ! ಡಿ.16ರಂದು ಸೊರಬದ ಈ ಕೆಳಗಿನ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post