ಕಲ್ಪ ಮೀಡಿಯಾ ಹೌಸ್ | ಸಾಗರ |
ಸುಪ್ರಸಿದ್ದ ಶ್ರೀ ಮಾರಿಕಾಂಬ ದೇವಿ ಜಾತ್ರೆಯ #Shri Marikamba Fair ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಗೋಡು ತಿಮ್ಮಪ್ಪ #Kagodu Thimmappa ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಉಪ ವಿಭಾಗೀಯ ಆಸ್ಪತ್ರೆಯ ಜನಪ್ರಿಯ ವೈದ್ಯರಾದ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ.
ದೇವಸ್ಥಾನದಲ್ಲಿ ತೀವ್ರ ಜನಸಂದಣಿಯಿAದ ಉಸಿರಾಟ ಸಮಸ್ಯೆಯಾಗಿದ್ದೂ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದಾಗಿ ಮಾನ್ಯರೆ ಅರೋಗ್ಯ ಸುಧಾರಣೆಯಾಗಿದ್ದೂ ಅರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















