ಕಲ್ಪ ಮೀಡಿಯಾ ಹೌಸ್ | ಸಾಗರ |
ಶರಾವತಿ ಮುಳುಗಡೆ ಸಂತ್ರಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ, ಶಾಸಕ ಹೆಚ್. ಹಾಲಪ್ಪ ಅವರ ನೇತೃತ್ವದಲ್ಲಿ ಸೆ.23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯ ನಿರ್ಣಯದ ಮುಂದುವರೆದ ಭಾಗವಾಗಿ ಅ.೪ರಂದು ಶಾಸಕ ಹೆಚ್. ಹಾಲಪ್ಪ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರನ್ನು ಭೇಟಿಯಾಗಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಚರ್ಚಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















