ಕಲ್ಪ ಮೀಡಿಯಾ ಹೌಸ್ | ಸಾಗರ/ಶಿವಮೊಗ್ಗ |
ಮಾರುಕಟ್ಟೆಗೆ ಸಾಗಿಸುತ್ತಿದ್ದ ಅಡಿಕೆ ಮೂಟೆಗಳನ್ನು ಸೀಜ್ ಮಾಡಿದ್ದಕ್ಕಾಗಿ ಆಕ್ರೋಶಗೊಂಡ ರೈತರು ಸಾಗರ ರೈತರು ನಗರದ ವಾಣಿಜ್ಯ ಕಚೇರಿ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಸಾಗರದ ವಾಣಿಜ್ಯ ತೆರಿಗೆ ಕಚೇರಿ ಮುಂಭಾಗ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದು, ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾರುಕಟ್ಟೆಗೆ ಸಾಗಿಸುತ್ತಿದ್ದ ಅಡಿಕೆ ಮೂಟೆಗಳನ್ನು ಸೀಜ್ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಸಾಗರ ಪ್ರಾಂತ್ಯ ಅಡಿಕೆ ಬೆಳಗಾರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಸಣ್ಣ ವಾಹನದಲ್ಲಿ ರೈತರೋರ್ವರು ಅಡಿಕೆ ಸಾಗಿಸುವ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದರು. ಸೀಜ್ ಮಾಡಿದ ಅಡಿಕೆ ಚೀಲಗಳು ಸಾಗರದ ಬಾರಂಗಿ ಹೋಬಳಿ ಕುಡಗುಂಜಿ ನಿವಾಸಿ ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ್ದು ಎಂದು ಹೇಳಲಾಗಿದೆ.
Also read: ಸಮಸ್ಯೆಗಳನ್ನು ಅರಿತ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ | ಕಲೀಂ ಪಾಶಾ
ಅಡಿಕೆ ಚೀಲಗಳನ್ನು ವಶಪಡಿಸಿಕೊಂಡ ನಂತರ ದಾಖಲೆಗಳನ್ನು ತೋರಿದ ನಂತರವೂ ಅಧಿಕಾರಿಗಳು ಬಿಡಲಿಲ್ಲ ಎಂದು ರೈತರು ಆರೋಪಿಸಿದ್ದಾರೆ. ದಿನವಿಡೀ ಕಚೇರಿಯ ಮುಂಭಾಗದಲ್ಲಿ ಅಧಿಕಾರಿಗಳು ವಾಹನವನ್ನು ನಿಲ್ಲಿಸಿಕೊಂಡಿದ್ದಾರೆ.
ಅಧಿಕಾರಿಗಳ ಈ ನಡೆಗೆ ಆಕ್ರೋಶ ರೈತರು ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಅಡಿಕೆ ಚೀಲ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಕೆಲವುಕಾಲ ರೈತರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post