ಕಲ್ಪ ಮೀಡಿಯಾ ಹೌಸ್ | ಸಾಗರ |
ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಡಿ. ಬಿ. ಧನಂಜಯ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದ್ದು, ಇದು ಕೇವಲ ಒಂದು ದಿನದ ಮಟ್ಟಿಗೆ ಮಾತ್ರವಾಗಿದೆ.
ಹೌದು… ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿದ್ದು, 55 ಪೌರಾಯುಕ್ತರನ್ನು ಕೇವಲ ಒಂದು ದಿನದ ಮಟ್ಟಿಗೆ ಮಾತ್ರ ಹೊಸ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದೆ.
ಅದರಂತೆ, ಉಡುಪಿ ಜಿಲ್ಲಾ ನಗರ ಯೋಜನೆ ನಿರ್ದೇಶಕರ ಕಚೇರಿಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಿ. ಬಿ. ಧನಂಜಯ ಅವರನ್ನು ಕೇವಲ ಒಂದು ದಿನದ ಮಟ್ಟಿಗೆ ಸಾಗರ ನಗರಸಭೆ ಪೌರಾಯುಕ್ತರನ್ನಾಗಿ ವರ್ಗ ಮಾಡಲಾಗಿದೆ. ಒಂದು ದಿನದ ನಂತರ, ಹಾಲಿ ನಿರ್ವಹಿಸುತ್ತಿರುವ ಹುದ್ದೆಯಲ್ಲಿಯೇ ಮುಂದುವರೆಯುವಂತೆ ಸೂಚನೆ ನೀಡಿದೆ.
ಕೇವಲ ಒಂದು ದಿನದ ಮಟ್ಟಿಗೆ ಮಾತ್ರ ವರ್ಗ ಮಾಡಿರುವುದು ಏಕೆ ಎಂಬ ಪ್ರಶ್ನೆ ಈಗ ಮೂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post