ಕಲ್ಪ ಮೀಡಿಯಾ ಹೌಸ್ | ಸಾಗರ |
ಶಾಸಕ ಹೆಚ್. ಹಾಲಪ್ಪ #MLA Halappa ಅವರು, ಸಾಗರದ ಜಂಬಗಾರು ಹಾಸ್ಟೆಲ್ ನಲ್ಲಿ ವಸತಿ ಶಾಲೆಗಳ ಹಾಗೂ ಹಾಸ್ಟೆಲ್ ಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ಡನ್ ಮತ್ತು ಸಿಬ್ಬಂದಿಗಳ ಸಭೆ ನೆಡೆಸಿದರು.
ಮಕ್ಕಳಿಗೆ ನೀಡಬೇಕಾದ ಆಹಾರ ಕಳಪೆಯಾಗಿದೆ, ಅಕ್ಕಿಯನ್ನು ಸರಿಯಾಗಿ ಸ್ವಚ್ಛಗೊಳಿಸದೆ ಅಡುಗೆ ಮಾಡಿ ಬಡಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿ ಘಟನೆ ಮತ್ತೆ ಮರುಕಳಿಸಿದರೆ ಸಂಬಂಧ ಪಟ್ಟವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವ ಬಗ್ಗೆ ಎಚ್ಚರಿಸಿದರು.
Also read: ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗಾಗಿ ಸಿಎಂಗೆ ಸಂಸದ ರಾಘವೇಂದ್ರ ಮನವಿ
ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವಂತೆ, ಹಾಸ್ಟೆಲ್ ಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡು, ಮಕ್ಕಳಿಗೆ ಅವಶ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post