ಕಲ್ಪ ಮೀಡಿಯಾ ಹೌಸ್ | ಸಾಗರ |
ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು.
ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜು ವೇಳಾಪಟ್ಟಿ ಬದಲಾವಣೆಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ ನಡೆಸಿ, ನಂತರ ತಿರ್ಮಾನ ಕೈಗೊಳ್ಳಬೇಕಿತ್ತು. ಈಗಿರುವ ವೇಳಾಪಟ್ಟಿಯಿಂದ ಹಲವಾರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಅನಾನುಕೂಲ ಆಗುತ್ತಿದೆ. ಆದ್ದರಿಂದ ಕೊಡಲೇ ಶಾಸಕ ಹರತಾಳು ಹಾಲಪ್ಪ ಮಧ್ಯ ಪ್ರವೇಶ ಮಾಡಿ ವೇಳಾಪಟ್ಟಿ ಬದಲಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪ್ರಮುಖರಾದ. ಪ್ರಶಾಂತ್. ಪ್ರದೀಪ್. ಹರೀಶ್. ಅಮೋಘ ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post