ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ನಗರದಾದ್ಯಂತ ಮಾರ್ಚ್ 1ರಿಂದ ಪ್ರತಿದಿನ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಶಾಸಕ ಎಚ್. ಹಾಲಪ್ಪ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ನಗರಸಭೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಜನರಿಗೆ ನೀರಿನ ಅಭಾವ ಆಗಬಾರದು ನಗರಸಭೆ ಸದಸ್ಯರು ಪ್ರತಿವಾರ್ಡ್‌ಗಳಲ್ಲಿ ನೀರಿನ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದರು.
ಸಾಗರಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡಲು ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, 3 ಪಂಪ್ ಸೆಟ್’ಗಳು ಕಾರ್ಯ ನಿರ್ವಹಿಸುತ್ತಿವೆ. 1.35 ಲಕ್ಷ ನೀರನ್ನು ಲಿಫ್ಟ್ ಮಾಡುವ ಸಾಮರ್ಥ್ಯವಿದೆ. ತುರ್ತು ಸಂದರ್ಭದ ಅನುಕೂಲಕ್ಕೆ ಹೆಚ್ಚುವರಿ 3 ಪಂಪ್ ಸೆಟ್’ಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮಾರ್ಚ್ 15 ರಿಂದ ಪ್ರತಿನಿತ್ಯ ನಗರಕ್ಕೆ ನೀರನ್ನು ಸರಬರಾಜು ಮಾಡಲು ತೀರ್ಮಾನಿಸಲಾಗಿದೆ. ಇದು ಯಾವುದೇ ಕಾರಣಕ್ಕೂ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಇನ್ನು, ಮಾರ್ಚ್ 1ರಿಂದ ಅಧಿಕೃತವಾಗಿ ನೂತನ ಬಸ್ ನಿಲ್ದಾಣದಿಂದ ಬಸ್ ಸಂಚಾರ ಪ್ರಾರಂಭಿಸುವ ಬಗ್ಗೆ ತೀರ್ಮಾನಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ವಿನಂತಿಸಿದರು.
ಮಾರ್ಚ್ ಒಂದರಿಂದ ಸಾಗರ-ಕಟ್ಟಿನಕಾರು ಮಾರ್ಗ ಕೆಎಸ್’ಅರ್’ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post