ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಕಾರು ಆಯನೂರು ಬಳಿ ಹಳ್ಳಕ್ಕೆ ಇಳಿದಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ಪರಾರಿಯಾಗಿದ್ದಾನೆ.
ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದೆ.
Also read: ಭೌತಿಕ ಬದುಕಿಗೆ ಧರ್ಮಪ್ರಜ್ಞೆ ಅತ್ಯವಶ್ಯ: ಶ್ರೀ ರಂಭಾಪುರಿ ಜಗದ್ಗುರು
ಕಾರಿನ ಚಾಲಕ ನಿದ್ದೆಯ ಮಂಪರಿನಲ್ಲಿ ಹಳ್ಳಕ್ಕೆ ಕಾರು ಇಳಿಸಿದ್ದಾನೆ ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಹಳ್ಳಕ್ಕೆ ಇಳಿದ ಕಾರಿನ ಸಮೀಪ ಓರ್ವ ಮಹಿಳೆ ಕುಳಿತಿದ್ದ ದೃಶ್ಯ ಲಭ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post