ಕಲ್ಪ ಮೀಡಿಯಾ ಹೌಸ್ | ಸಾಗರ |
ಇಲ್ಲಿನ ಸಣ್ಣಮನೆ ಸೇತುವೆ ಬಳಿ ಬುಧವಾರ ನಡೆದ ಟಿಪ್ಪರ್ ಲಾರಿ ಅಪಘಾತದಲ್ಲಿ ಗಾಯಾಳುವಾಗಿದ್ದ ಲಾರಿ ಚಾಲಕ ಸುಭಾಷ್ ನಗರದ ಕೃಷ್ಣಾಚಾರಿ (73) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಕ್ರವಾರ ಮದ್ಯಾಹ್ನ ಮೃತಪಟ್ಟಿದ್ದಾರೆ.
ಘಟನೆ ಹಿನ್ನೆಲೆ:
ಇಲ್ಲಿನ ಸಣ್ಣಮನೆ ಸೇತುವೆ ಬಳಿ ಬುಧವಾರ ಮುಂಜಾನೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿನಿಯರಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು.
ಬಿಸಿಎಂ ಹಾಸ್ಟೆಲ್ ನಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತೆರಳಿತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಜೋಗದ ಕಡೆಯಿಂದ ಬಂದ ಜಲ್ಲಿ ತುಂಬಿದ್ದ ಟ್ರಿಪ್ಪರ್ ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿದೆ. ಸಾಗರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್’ನಲ್ಲಿ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಪ್ರತಿಮಾ ಎಂಬ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದರು.
ಇನ್ನಿಬ್ಬರು ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post