ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಶಿಗ್ಗಲು-ಕೋಗಾರು ಮಧ್ಯದ ಶರಾವತಿ ಹಿನ್ನೀರಿನ ಎಣ್ಣೆಹೊಳೆಗೆ ನೂತನ ಲಾಂಚ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಉದ್ಘಾಟನೆ ಗೊಳಿಸಲಾಗುವುದು ಎಂದು ಶಾಸಕ ಹೆಚ್. ಹಾಲಪ್ಪ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾರ್ವಜನಿಕರು ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು. ಹಾಗೂ ಶರಾವತಿ ಹಿನ್ನೀರಿನ ಪ್ರದೇಶದ ಜನರು ರಸ್ತೆ ಮೂಲಕ 40-50 ಕಿಮೀ ಕ್ರಮಿಸಿ ಕೇಂದ್ರ ಸ್ಥಾನಗಳಿಗೆ ಬರುವಂತಾಗಿದೆ ಹೊಳೆ ಮೂಲಕ ಕೇವಲ 3-4 ಕಿಮೀ ಅಂತರದಲ್ಲಿ ತಲುಪ ಬಹುದು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ಸೂಕ್ತ ಕ್ರಮ ಕಲ್ಪಿಸಲಾಗುವುದು. ಶೀಘ್ರದಲ್ಲಿ ತುಮರಿ-ಬರುವೆ ಸಂಪರ್ಕಕ್ಕೂ ಲಾಂಚ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು, ನಗರ, ಗ್ರಾಮಾಂತರ ಮಂಡಲಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















