ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದಿಂದ ಆನಂದಪುರ ಮಾರ್ಗವಾಗಿ ಕಾರಿನಲ್ಲಿ ಮಾದಕ ವಸ್ತು ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ 960ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಆಚಾಪುರ ಗ್ರಾಮದ ಮೊಹಮ್ಮದ್ ಬೇಗ್ (42) ಬಂಧಿತ ಆರೋಪಿಯಾಗಿದ್ದು, ಈತ ಕಾರಿನಲ್ಲಿ ಅಕ್ರಮ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಆನಂದಪುರ ಠಾಣಾ ಪೊಲೀಸರು ದಾಳಿ ನಡೆಸಿ, 13,0000ರೂ. ಮೌಲ್ಯದ 960ಗ್ರಾಂ ಒಣ ಗಾಂಜಾ ಸೇರಿದಂತೆ ಒಂದು ಮೊಬೈಲ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.












Discussion about this post