ಕಲ್ಪ ಮೀಡಿಯಾ ಹೌಸ್ | ಸಾಗರ |
ಟಿಟಿ ವಾಹನ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಗಾಯಗೊಂಡ ಸವಾರನನ್ನು ಅರುಣ್ ಕುಮಾರ್ (45) ಎಂದು ಗುರುತಿಸಲಾಗಿದೆ.
ಜೋಗದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ಆನಂದಪುರದಿಂದ ಸಾಗರದ ಕಡೆಗೆ ಸಂಚರಿಸುತ್ತಿದ್ದ ಸ್ಕೂಟಿ ನಡುವೆ ಆನಂದಪುರ ರಾಷ್ಟ್ರೀಯ ಹೆದ್ದಾರಿಯ ಅರಣ್ಯ ಇಲಾಖೆಯ ವಸತಿ ನಿಲಯದ ಮುಂಭಾಗ ಅಪಘಾತ ಸಂಭವಿಸಿದೆ.
Also read>> ಶಿವಮೊಗ್ಗ: ವಿದ್ಯೆಯೊಂದಿಗೆ ವ್ಯಕ್ತಿತ್ವ ವಿಕಾಸಕ್ಕೂ ಆದ್ಯತೆ ನೀಡಿ: ನಾರಾಯಣ ರಾವ್
ಅಪಘಾತದ ರಭಸಕ್ಕೆ ಸ್ಕೂಟಿ ಸವಾರ ಟಿಟಿ ವಾಹನದ ಅಡಿಭಾಗದಲ್ಲಿ ಸಿಲುಕಿಕೊಂಡಿದ್ದು, ಅವರ ಕಾಲಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸ್ಥಳೀಯರು ಹಾಗೂ ಪೊಲೀಸರು ಗಾಯಾಳುವನ್ನು ತಕ್ಷಣ ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








