ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ವಿಶಾಲಾಕ್ಷಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.


2021ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಾಗರ ತಾಲ್ಲೂಕು ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಪಂ ವ್ಯಾಪ್ತಿಯ ಹುಣಸೂರು-3 ಕ್ಷೇತ್ರದಿಂದ ಹಿಂದುಳಿದ ವರ್ಗ ಅ ಮಹಿಳೆ ಮೀಸಲಾತಿಯಲ್ಲಿ ಗೆದ್ದು, 2021ರ ಫೆಬ್ರವರಿ 12ರಂದು ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷಹುದ್ದೆಗೆ ಆಯ್ಕೆಯಾಗಿ, ಇಲ್ಲಿಯವರೆಗೆ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದೇನೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ತನ್ನ ಆರೋಗ್ಯ ಸರಿಯಿಲ್ಲದ ಕಾರಣ, ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಾಗದ ಕಾರಣ ನಾನು ಸ್ವಇಚ್ಚೆಯಿಂದ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















