ಕಲ್ಪ ಮೀಡಿಯಾ ಹೌಸ್ | ಸಾಗರ |
ಸರಕಾರದ ನಿಯಮಗಳಿಗೆ ಒಳಪಟ್ಟು ತಾಲೂಕಿನ ವರದಹಳ್ಳಿಯ ಶ್ರೀಧರಾಶ್ರಮದಲ್ಲಿ ಶ್ರೀಭಗವಾನರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ.
ಶನಿವಾರ ಮತ್ತು ಭಾನುವಾರ ಶ್ರೀಧರಾಶ್ರಮದಲ್ಲಿ ಸಾರ್ವಜನಿಕರ ಮತ್ತು ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30ರಿಂದ 5ರ ವರೆಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಒಂದು ಸಮಯಕ್ಕೆ ಕೇವಲ ಐವತ್ತು ಜನರಿಗೆ ಮಾತ್ರ ಪ್ರವೇಶವಿದ್ದು, ಕೋವಿಡ್ ಲಸಿಕೆಯ ಎರಡು ಡೋಸ್ ಪೂರ್ಣ ಗೊಳಿಸಿರಬೇಕು ಎಂದು ಶ್ರೀ ಶ್ರೀಧರ ಸೇವಾ ಮಹಾಮಂಡಲ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post