ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಒಂದೆಡೆ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿ ನಾರಿ ಶಕ್ತಿಯನ್ನು ಬೆಂಬಲಿಸುತ್ತಿದ್ದರೆ ಇನ್ನೊಂದೆಡೆ ಕಾಂಗ್ರೆಸ್ #Congress ಪಕ್ಷ ನಾರಿಶಕ್ತಿಗೆ ಅಪಮಾನ ಮಾಡುತ್ತಿದೆ ಎಂದು ಖ್ಯಾತ ಕ್ರೀಡಾಪಟು, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ #SainaNehwal ಕಿಡಿ ಕಾರಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ್ ಕೇವಲ ಅಡುಗೆ ಮಾಡಲು ಲಾಯಕ್ಕು ಎಂದು ಟೀಕಿಸಿದ ಶಾಸಕ ಶಾಮನೂರು ಶಿವಶಂಕರಪ್ಪ #ShamanurShivashankarappa ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ನೆಹ್ವಾಲ್ ಈ ಕುರಿತಂತೆ ಎಕ್ಸ್ ಜಾಲತಾಣದಲ್ಲಿ ಟೀಕಿಸಿದ್ದಾರೆ.

ಭಾರತಕ್ಕಾಗಿ ನಾನು ಆಟವಾಡಿ ಪದಕಗಳನ್ನು ಗೆದ್ದಾಗ ಆಗಿನ ಕಾಂಗ್ರೆಸ್ ನಮಗೆ ಯಾವುದಕ್ಕೆ ಆದ್ಯತೆ ನೀಡುತ್ತಿತ್ತು ಎಂದು ಪ್ರಶ್ನಿಸಿರುವ ಅವರು, ಕಾಂಗ್ರೆಸ್ ಎಂದಿಗೂ ಮಹಿಳೆಯರಿಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ನಮ್ಮ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ ಮತ್ತು ಇನ್ನೊಂದೆಡೆ ನಾರಿ ಶಕ್ತಿ ಕಾ ಅಪ್ಮಾನ್ ಮತ್ತು ಸ್ತ್ರೀದ್ವೇಷದ ಜನರು ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ನಿಜವಾಗಿಯೂ ಅಸಮಾಧಾನದ ಸಂಗತಿ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post