ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊರೋನ ಮಹಾಮಳೆಯಲ್ಲಿ ಸಲಗ ಚಿತ್ರತಂಡ ಮಲೆನಾಡ ರಮಣೀಯ ತಾಣಗಳಲ್ಲಿ ಮಧುರ ಸುಮಧುರ ಡ್ಯುಯೆಟ್ ಹಾಡನ್ನ ನಯನ ಮನೋಹರವಾಗಿ ಚಿತ್ರಿಸಿ, ಮತ್ತೊಮ್ಮೆ ಜೋರಾಗಿ ಸದ್ದು ಸುದ್ದಿಯಾಗ್ತಿದೆ.
ದುನಿಯಾ ವಿಜಯ್ ನಿರ್ದೇಶಿಸಿ ನಟಿಸ್ತಿರೋ ಈ ಚಿತ್ರದಲ್ಲಿ ಡಾಲಿ ಧನಂಜಯ ಪ್ರಮುಖ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಟಗರು ಕೆ.ಪಿ. ಶ್ರೀಕಾಂತ್ ನಿರ್ಮಾಣದಲ್ಲಿ ತಯಾರಾಗ್ತಿರೋ ಈ ಚಿತ್ರ ಈಗಾಗ್ಲೇ ಹತ್ತು ಹಲವು ವಿಶೇಷಗಳಿಂದ ಮಾದ್ಯಮದಲ್ಲಿ ಹಾಗೂ ಅಭಿಮಾನಿಗಳಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ. ಈ ನಡುವೆ ಕೋವಿಡ್ ಹಾವಳಿಯಿಂದ ಎಲ್ಲಾ ಲಾಕ್ ಆಗಿದ್ರೂ ಸಲಗ ಮಾತ್ರ ಮತ್ತೊಂದು ವಿಶೇಷ ವಿಚಾರದಿಂದ ಸಖತ್ತಾಗೇ ಘರ್ಜಿಸ್ತಿದೆ.
ಕೋವಿಡ್ ನಡುವೆ ಸರ್ಕಾರ ನೀಡಿರೋ ಎಲ್ಲಾ ಸೂಚನೆಗಳನ್ನು ಪಾಲಿಸಿ, ನಾಯಕ ನಾಯಕಿ ಸೇರಿ ಕೇವಲ 12 ಮಂದಿ ತಂತ್ರಜ್ಞಾನದೊಂದಿಗೆ ಸಲಗದ ಈ ಬ್ಯೂಟಿಫುಲ್ ಹಾಡನ್ನ ಚಿತ್ರಿಸಿರೋದು ವಿಶೇಷ.
ಸಲಗ ಚಿತ್ರಕ್ಕಾಗಿ ಚರಣ್ ರಾಜ್ ಸಂಯೋಜನೆಯ ಮಳೆಯೇ ಮಳೆಯೇ ಅಂಬೆಗಾಲೊಡುತ್ತಾ ಸುರಿಯೇ…ಅನ್ನೋ ರೊಮ್ಯಾಂಟಿಕ್ ಹಾಡನ್ನು ಸಾಹಿತ್ಯಕ್ಕೆ ತಕ್ಕಂತೆ ಜಡ್ಮಿಳೆಯಲ್ಲೇ ಹೀಗೆ ಸದ್ದಿಲ್ಲದೇ ಚಿತ್ರಿಸಿಕೊಂಡು ಬಂದಿದೆ.
ದುನಿಯಾ ವಿಜಯ್ ಸಂಜನಾ ಆನಂದ್ ನಡುವಿನ ಈ ಪ್ರಣಯ ಗೀತೆಯನ್ನ ಮಳೆ, ಚಳಿ ನಡುವೆ ಯಾವುದನ್ನು ಲೆಕ್ಕಿಸದೆ ಚಿತ್ರೀಕರಿಸಲಾಗಿದೆ. ಅದ್ರಲ್ಲೂ ಛಾಯಾಗ್ರಹಕ ಶಿವಸೇನ ಕೆಲ್ ಸೀಕ್ವೆನ್ಸ್’ಗಳನ್ನು ಒರಿಜಿನಲ್ ಮಳೆಯಲ್ಲೇ ಚಿತ್ರಿಸಿರೋದು ಮತ್ತೊಂದು ವಿಶೇಷ. ಇದೇ ಕಾರಣಕ್ಕೆ ಜಡಿ ಮಳೆಯ ಒಂದು ಶಾಟ್ ಗಾಗಿ ಚಿತ್ರತಂಡ ನಾಲ್ಕೈದು ಗಂಟೆ ಕಾದು 12 ಜನರೂ ಕೂಡಿ ತಲೆಗೊಂದು ಕೆಲಾದಂತೆ ಮಳ್ಕೆಸರಲ್ಲಿ ನಾಲ್ಕು ದಿನ ಎದ್ದು ಬಿದ್ದು ಅದ್ಭುತ ಹಾಡಿನ ಚಿತ್ರೀಕರಣ ಮಾಡಿದ್ದಾರೆ.
ಅದ್ಭುತ ಹಾಡೊಂದನ್ನು ಸದ್ದಿಲ್ಲದೆ ಚಿತ್ರೀಕರಿಸಿಕೊಂಡು ಬಂದಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಹಾಸನದ ಸಕಲೇಶಪುರ ಸೇರಿ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಸಲಗ ಚಿತ್ರದಲ್ಲಿ ಈ ಹಾಡು ಮತ್ತೊಂದು ಸ್ಪೆಷಲ್ ಮತ್ತುಹೈಲೈಟ್ ಗಳಲ್ಲೊಂದಾಗಲಿದೆಯಂತೆ.
Get In Touch With Us info@kalpa.news Whatsapp: 9481252093
Discussion about this post