ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋಟ್ಯಂತರ ಅಭಿಮಾನಿಗಳನ್ನು ಅಗಲಿರುವ ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರ ಬದುಕಿನ ಕಥೆಯನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
Also Read: ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೇ ಜೀವ ಬೆದರಿಕೆ: ಎಫ್’ಐಆರ್ ದಾಖಲು
ಈ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಾಧ್ಯಮಗಳಿಗೆ ಮಾತನಾಡಿದ್ದು, ಪುನೀತ್ ಅವರ ಜೀವನ ಕಥನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಜತೆ ಮಾತನಾಡಿ ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿದ ಅಂತಿಮ ನಿರ್ಧಾರ ತಗೆದುಕೊಳ್ಳುತ್ತೇನೆ ಎಂದಿದ್ದಾರೆ.
Also Read: ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ: ಕೊಲೆಗೆ ಕಾರಣವೇನು?
ಪುನೀತ್ ಕೇವಲ ಚಿತ್ರರಂಗದಲ್ಲಷ್ಟೇ ಅಲ್ಲ, ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಆರ್ಥಿಕವಾಗಿ ಹಿಂದುಳಿದ, ಅನಾಥ ಮಕ್ಕಳ ಶಿಕ್ಷಣ, ಆರ್ಥಿಕ ಸಹಾಯ ಸೇರಿದಂತೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅದರಿಂದ ಯಾವುದೇ ಫಲಾಪೇಕ್ಷೆ ನಿರೀಕ್ಷಿಸದೇ ಕರ್ನಾಟಕ ಜನತೆಯ ಮನೆ ಮನಗಳಲ್ಲಿ ನೆಲೆಸಿದ್ದಾರೆ. ಇಂತಹ ಕರುಣಾಮಯಿ ಇಂದು ನಮ್ಮೊಂದಿಗಿಲ್ಲವಾದರೂ ಅವರ ನೆನಪು, ಆದರ್ಶಗಳು ಮಕ್ಕಳಿಗೆ ತಿಳಿಯಬೇಕು ಎಂಬ ಉದ್ದೇಶದಿಂದ ಇದೀಗ ಸರ್ಕಾರ ಅವರ ಜೀವನ ಕಥೆಯನ್ನು 4-5ನೆಯ ತರಗತಿಯ ಶಾಲಾ ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post