ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸ್ಯಾಂಡಲ್ ವುಡ್ ನಟ ಧ್ರವ ಸರ್ಜಾ #Druvasarja ಸೇರಿದಂತೆ ಮಾರ್ಟಿನ್ ಚಿತ್ರತಂಡದ ಸದಸ್ಯರಿದ್ದ ವಿಮಾನ #Flight ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ನಟ ಧ್ರುವ ಸರ್ಜಾ ಹಾಗೂ ಅವರ ಮಾರ್ಟಿನ್ ಸಿನಿಮಾ #MartinMovie ತಂಡದವರು ವಿಮಾನ ದುರಂತದಿಂದ ಪಾರಾಗಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.
ಇಷ್ಟಕ್ಕೂ ಆಗಿದ್ದೇನು?
ಧ್ರವ ಸರ್ಜಾ ನಟನೆಯ ಮಾರ್ಟಿನ್ ಚಿತ್ರತಂಡ ಅಂತಿಮ ಹಂತದ ಹಾಡಿನ ಚಿತ್ರೀಕರಣಕ್ಕಾಗಿ ಸೋಮವಾರ ಸಂಜೆ ಹಾಡೊಂದರ ಚಿತ್ರೀಕರಣಕ್ಕಾಗಿ ದೆಹಲಿ #Delhi ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನದಲ್ಲಿ ಪಯಣಿಸುತ್ತಿತ್ತು.
.#Martin team & #DhruvaSarja shared a video after surviving a May Day scare on #IndigoFlight No. 6E6125. They thanked the pilot and expressed gratitude for their safety amidst rough weather. @AP_Arjun_film @ImranSardhariya #SafetyFirst pic.twitter.com/s5hKsa4yJ1
— A Sharadhaa (@sharadasrinidhi) February 19, 2024
ಆದರೆ ಇದ್ದಕ್ಕಿದ್ದಂತೆ ವಿಮಾನ #Flight ಹಾರಾಟದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಹವಾಮಾನ ವೈಪರೀತ್ಯದಿಂದಾಗಿ ರಡಾರ್ ಕಂಟ್ರೋಲ್ ತಪ್ಪಿದ್ದ ವಿಮಾನ ಕಾರ್ಗಿಲ್ ಪ್ರದೇಶಕ್ಕೂ ಹೋಗಿ ಹಠಾತ್ತನೆ ಸಾವಿರಾರು ಅಡಿ ಕೆಳಗಿಳಿದು ಪೈಲೆಟ್ ಕಂಟ್ರೋಲ್ ತಪ್ಪಿದೆ. ಪರಿಣಾಮವಾಗಿ ವಿಮಾನದ ಸೀಟುಗಳು ನಡುಗಿದ್ದು, ಪ್ರಯಾಣಿಕರು ಗಾಬರಿ ಆಗಿದ್ದಾರೆ.
ಕೊನೆಗೆ ಪೈಲಟ್ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ.
ಈ ಕುರಿತಂತೆ ಧ್ರವ ಸರ್ಜಾ ಪ್ರತಿಕ್ರಿಯೆ ನೀಡಿದ್ದು, ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದಿದ್ದಾರೆ.
ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post