ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ದೇಶದೆಲ್ಲೆಡೆ ಭಾರೀ ಸದ್ದು ಮಾಡುತ್ತಿರುವ ಕಾಂತಾರ ಚಿತ್ರವನ್ನು ವೀಕ್ಷಿಸಿ ಅದ್ಭುತ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ Jaggesh ಹೊರ ದೇಶ ಪ್ರವಾಸದಲ್ಲಿದ್ದು, ಕಾಂತಾರ Kantara ಸಿನಿಮಾ ನೋಡಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.
ಅಮೇರಿಕದ ಡೆನ್ವರ್‌ನಲ್ಲಿ ಒರ್ಯಾಕಲ್ ಮಾಲ್‌ನಲ್ಲಿ ಕಾಂತಾರ ವೀಕ್ಷಿಸಿ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಿಷಬ್ Rishab Shetty ಅವರ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಹಾಗೂ ತಾವು ದಕ್ಷಿಣ ಕನ್ನಡದ ದೇವಾಲಯದ ಭಕ್ತನಾಗಿದ್ದು 30 ವರ್ಷಗಳಿಂದ ವರ್ಷಕ್ಕೆ ಒಂದು ಬಾರಿ ಪೊಳಲಿ, ಕಟೀಲು, ಉಡುಪಿ ಕೃಷ್ಣ, ಮೂಕಾಂಬಿಕೆ, ಕೊರಗಜ್ಜ, ಅಂಬಲಪಾಡಿ, ಉಡುಪಿ ರಾಯರ ಮಠ ದರ್ಶನ ಮಾಡುವ ಅಭ್ಯಾಸವಿದೆ. ದಕ್ಷಿಣ ಕನ್ನಡ ಶ್ರೇಷ್ಠ ದೇವಭೂಮಿಯಾಗಿದ್ದು, ಆಧ್ಯಾತ್ಮಿಕ ಅನುಭವಕ್ಕೆ ಈ ಕ್ಷೇತ್ರದಲ್ಲಿ ಸಂತೃಪ್ತ ಭಾವ ಸಿಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.












Discussion about this post