ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ನಟರಾಕ್ಷಸ ಡಾಲಿ ಧನಂಜಯ್ Dali Dhananjaya ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ… Tagaru Palya ಯೋಗರಾಜ್ ಭಟ್ಟರ Yograj Bhat ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಕಳೆದ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಮಂಡ್ಯ, ಮಳವಳ್ಳಿ, ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.











Discussion about this post