ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ಕಲೆಗೆ ಭಾಷೆಯ ಹಂಗಿಲ್ಲ. ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಬಂದಮೇಲಂತೂ ಸಿನಿಮಾಗಳು ಭಾಷೆಯ ಗಡಿದಾಟಿವೆ. ಬೇರೆ ಬೇರೆ ಭಾಷೆಯ ಸಿನಿಮಾಗಳು ಎಲ್ಲಾ ಕಡೆ ಬಿಡುಗಡೆಯಾಗುತ್ತಿವೆ. ಈಗಾಗಲೇ ಹಿಂದಿ, ತಮಿಳು, ತೆಲುಗು ಡಬ್ ಆಗಿ ಕನ್ನಡದಲ್ಲಿ ಬಿಡುಗಡೆಯಾಗುತ್ತಿವೆ. ಅದರಂತೆ ಈಗ ಗುಜರಾತಿ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.
ಜುಲೈ 7ರಂದು ರಾಯರು ಬಂದರು ಮಾವನ ಮನೆಗೆ ಚಿತ್ರ ಕನ್ನಡ ಪ್ರೇಕ್ಷಕರ ಎದುರು ಬರಲಿದೆ. ಈ ಸಿನಿಮಾವನ್ನು ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ಬಿಡುಗಡೆ ಮಾಡುತ್ತಿದ್ದಾರೆ. ಅದರ ಮೊದಲ ಭಾಗವಾಗಿ ಇಂದು ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಡೀ ಚಿತ್ರತಂಡ ಭಾಗಿಯಾಗಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

Also read: “ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ; ಆಗಸ್ಟ್ ನಲ್ಲಿ ಬಿಡುಗಡೆ
ಕನ್ನಡದಲ್ಲಿ ಮಾತು ಆರಂಭಿಸಿದ ನಾಯಕ ತುಷಾರ್ ಸಾಧು, ಇದೊಂದು ಅದ್ಭುತ ಅನುಭವ. ನಾನು ಬೆಂಗಳೂರಿಗೆ ಎರಡನೇ ಬಾರಿ ಬಂದಿದ್ದೇನೆ. ಜಾಕ್ ಮಂಜು ಸರ್ ಇಲ್ಲದೇ ಈ ಕೆಲಸ ಆಗುತ್ತಿರಲಿಲ್ಲ ಎಂದು ತಿಳಿಸಿದರು.

ಸಾಧುತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್ ಬರೋಟ್, ಜಯ್ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ. ಕೌಟುಂಬಿಕ ಕಥಾಹಂದರದ ರಾಯರು ಬಂದರು ಮಾವನ ಮನೆಗೆ ಸಿನಿಮಾ ಮುಂದಿಮ ತಿಂಗಳ 7ರಂದು ಥಿಯೇಟರ್ ಗೆ ಎಂಟ್ರಿ ಕೊಡಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post