ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್ವುಡ್ |
ತುಂಬಾ ವರ್ಷಗಳಿಂದ ಪ್ರೀತಿಸುತ್ತಿದ್ದ ಸ್ಯಾಂಡಲ್ವುಡ್ ಜೋಡಿ ಹಸೆಮಣೆ ಏರಲು ತಯಾರಾಗಿದ್ದು, ನಟಿ ಹರ್ಷಿಕಾ ಪೂಣಚ್ಚ Harshika Ponacha ಮತ್ತು ನಟ ಭುವನ್ ಪೊನ್ನಣ್ಣ Bhuvan Bopanna ವಿವಾಹವಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎರಡೂ ಕುಟುಂಬದ ಸದಸ್ಯರು ಮತ್ತು ಆತ್ಮೀಯರ ಸಮ್ಮುಖದಲ್ಲಿ ಕೊಡಗಿನ ಇಗ್ಗುತ್ತಪ್ಪ ದೇವಾಲಯದಲ್ಲಿ ಇತ್ತೀಚೆಗೆ ಸರಳವಾಗಿ ಲಗ್ನಪತ್ರಿಕೆ ಕಾರ್ಯ ನಡೆದಿದೆ.
ಮದುವೆ ಆಮಂತ್ರಣ ಪತ್ರಿಕೆ ಕೂಡ ಸಿದ್ಧವಾಗಿದ್ದು, ಕೊಡಗು ಭಾಷೆಯಲ್ಲೇ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಕೊಡಗು ಸಂಪ್ರದಾಯದಂತೆಯೇ ಇಬ್ಬರೂ ಮದುವೆ ಆಗುತ್ತಿದ್ದು, ಮುಹೂರ್ತ ಕಾರ್ಯಗಳು ಬಹುತೇಕವಾಗಿ ಕೊಡಗಿನಲ್ಲೇ ನಡೆಯಲಿವೆ. ಭುವನ್ ಮತ್ತು ಹರ್ಷಿಕಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಟ್ಟಿಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.. ಮದುವೆಯಲ್ಲಿ ಈ ಜೋಡಿಯ ಆತ್ಮೀಯರು, ಸಿನಿಮಾ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.
Also read: ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ನವವಿವಾಹಿತ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















