ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಆಪರೇಶನ್ ಡಿ Operation D ಚಿತ್ರಕ್ಕೆ ಡಬ್ಬಿಂಗ್, ಎಸ್’ಎಫ್’ಎಕ್ಸ್, ಸಂಗೀತ ಸಂಯೋಜನೆ ಮುಕ್ತಯವಾಗಿ ವಿಎಫ್’ಎಕ್ಸ್ ಕೆಲಸ ಆರಂಭವಾಗಿದೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆಯಾಗಲಿದೆ.
ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ತಿರುಮಲೇಶ್ ವಿ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಕಾರ್ಯಕಾರಿ ನಿರ್ಮಾಪಕ ಹಾಗೂ ಕ್ರಿಯೇಟಿವ್ ಹೆಡ್ ಆಗಿ ಸುರೇಶ್ ಬಿ. ಕಾರ್ಯ ನಿರ್ವಹಿಸಿದ್ದಾರೆ.

ಕೆಂಪಗಿರಿ ಒಂದು ಹಾಡು ಹಾಗೂ ವೇದಿಕ ಉಳಿದ ಎಲ್ಲಾ ಹಾಡುಗಳನ್ನು ರಚಿಸಿದ್ದು, ಅನಿರುದ್ಧ್ ಶಾಸ್ತ್ರೀ ಮೊದಲ ಬಾರಿಗೆ ಚಿತ್ರದ ನಾಲ್ಕು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ವೇದಿಕ ಹಾಗೂ ಪೃಥ್ವಿ ಭಟ್ ಸಾಥ್ ನೀಡಿದ್ದಾರೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಶಿವಮಂಜು, ವೆಂಕಟಾಚಲ, ಜೂ ನರಸಿಂಹರಾಜು, ಮಹೇಶ್ ಎಸ್. ಕಲಿ, ಬಿ. ರಂಗನಾಥ, ಟಿ.ಎಸ್. ಶ್ರೀಧರ್, ಬಿ. ಸುರೇಶ್, ಸಂಚಯ ನಾಗರಾಜ್, ಕಿರಣ್ ಈಡಿಗ, ರವಿಶಂಕರ್, ಶಿವಾನಂದ, ಸೂರ್ಯವಂಶಿ (ಶಿವು ಅಪ್ಪಾಜಿ), ನಂಜಪ್ಪ ಎಸ್ ದೊಡ್ಡಮದುರೆ ಆರ್.ಜೆ. ಧೀರಜ್, ಪೃಥ್ವಿ ಬನವಾಸಿ, ಆಶಾ, ರೂಪ ಆರ್, ಧನಲಕ್ಷ್ಮಿ, ಕಿರಣ್, ನಾಗರಾಜ್ ದಾವಣಗೆರೆ, ಸಂತೋಷ್, ನಾಗರಾಜ್ ಕೀಲಗೆರೆ, ಖಾದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post