ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಮೋಹಕ ತಾರೆ ರಮ್ಯಾ Ramya ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗೆ ನಿರಾಸೆ ಆಗಿದೆ.
ರಾಜ್ ಬಿ ಶೆಟ್ಟಿ ರಚನೆ, ನಿರ್ದೇಶನದ ಸಿನಿಮಾ ಮೂಲಕ ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳಲಿದ್ದೇನೆ ಎಂದು ರಮ್ಯಾ ಹೇಳಿದ್ದರು. ಆದರೆ ಈಗ ಪ್ಲಾನ್ ಚೇಂಜ್ ಆಗಿದ್ದು, ರಮ್ಯಾ ಈ ಸಿನಿಮಾದಿಂದ ಹೊರಬಂದಿದ್ದಾರೆ. ಬದಲಾಗಿ ರಾಜ್ ಬಿ ಶೆಟ್ಟಿ ಸಿನಿಮಾದಲ್ಲಿ ಪ್ರೊಡ್ಯೂಸರ್ ಆಗಿ ಮಾತ್ರ ಮುಂದುವರಿಯಲಿದ್ದಾರೆ ಎನ್ನಲಾಗಿದೆ.

‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್ ಅವರ ಸಹಯೋಗದೊಂದಿಗೆ ಹೊರ ಬರುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಸಿರಿ ರವಿಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕೆ ಹೊಸ ಮುಖ ಪರಿಚಯ ಮಾಡಬೇಕೆಂದು ನಿರ್ಮಾಪಕಿ ರಮ್ಯಾ ಅವರೇ ಅಪೇಕ್ಷೆಪಟ್ಟರು. ಉದಯೋನ್ಮುಖ ಪ್ರತಿಭೆಗಳನ್ನು ಬೆಳಕಿಗೆ ತರುವ ಮುಖ್ಯ ಗುರಿಯನ್ನಿಟ್ಟುಕೊಂಡು ಪ್ರಾರಂಭಿಸಿದ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್. ಸ್ವಾತಿ ಮುತ್ತಿನ ಮಳೆ ಹನಿಯೇ ಒಂದು ಅಮೋಘವಾದ ಚಿತ್ರವಾಗಿ ನಿಮ್ಮ ಮುಂದೆ ಪ್ರಸ್ತುತ ಪಡಿಸಲು ನಾವು ಕಾತುರರಾಗಿದ್ದೇವೆ’ ಎಂದು ತಿಳಿಸಲಾಗಿದೆ.













Discussion about this post