ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ಜುಲೈ 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರು ಅಭಿನಯಿಸಲಿರುವ ಹೊಸ ಚಿತ್ರದ ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರತಂಡ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದೆ.
ದಂಡುಪಾಳ್ಯ ಖ್ಯಾತಿಯ ಶ್ರೀನಿವಾಸ್ ರಾಜು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಹೆಸರಿಡಲಾಗಿದ್ದು, ಗಣೇಶ್ ನಾಯಕರಾಗಿ ನಟಿಸುತ್ತಿರುವ 41ನೇ ಚಿತ್ರ ಇದಾಗಿದೆ.
ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಇದೇ ಮೊದಲ ಬಾರಿಗೆ ಗಣೇಶ್ ಜೊತೆ ಕೆಲಸ ಮಾಡುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ.
Also read: ಬದುಕಿನಲ್ಲಿ ಎದುರಾಗುವ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ: ನಾಗರಾಜ್ ಕಿವಿಮಾತು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post