ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ಅಂಬರೀಶ್ ಇಂದು ಬದುಕಿದ್ದರೆ 71 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಸಿನಿಮಾ ಹೊರತಾಗಿಯೂ ಅವರು ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗಿದ್ದವರು.
ಅಂಬರೀಶ್ ಪತ್ನಿ ಸುಮಲತಾ Sumalatha ತಮ್ಮ ಪ್ರೀತಿಯ ಪತಿ ಅಂಬರೀಶ್ Ambreesh ಮತ್ತು ಪುತ್ರ ಅಭಿಷೇಕ್ ಮಗುವಾಗಿದ್ದಾಗ ತೆಗೆದಿದ್ದ ಸುಂದರ ಫೋಟೋಗಳ ಗ್ಯಾಲರಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು. ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ ಎಂದು ಫೇಸ್ ಬುಕ್ ನಲ್ಲಿ ಬರೆದು ಕೊಂಡಿದ್ದಾರೆ.
Also read: ಶಿವಮೊಗ್ಗ | ಟಿಪ್ಪರ್ ಲಾರಿ ಡಿಕ್ಕಿ, ಶಾಲಾ ಬಾಲಕಿ ಸಾವು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















