ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಸಾಧ್ಯತೆಯಿದೆ ಎಂಬ ಹಿನ್ನೆಲೆಯಲ್ಲಿ ಹಳೇ ನಗರ ಠಾಣೆಯನ್ನು ನಿನ್ನೆ ರಾತ್ರಿ ಸ್ಯಾನಿಟೈಸೇಶನ್ ಮಾಡಲಾಗಿದೆ.
ನಿನ್ನೆ ರಾತ್ರಿ 11.30ರ ವೇಳೆಯಲ್ಲಿ ಠಾಣೆ ಹಾಗೂ ಈ ಠಾಣೆಯ ವಾಹನಗಳಿಗೆ ಸ್ಯಾನಿಟೈಸೇಶನ್ ಮಾಡಲಾಗಿದೆ.
ಹಳೇ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಇನ್ನೂ ಬರಬೇಕಿದೆ.
ಎಸ್’ಪಿ ಭೇಟಿ
ಇನ್ನು, ಸ್ಯಾನಿಟೈಸೇಶನ್ ನಡೆದ ಬೆನ್ನಲ್ಲೇ ಇಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಹಳೇ ನಗರ ಠಾಣೆಗೆ ಕೆಲವೇ ನಿಮಿಷಗಳ ಕಾಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Get in Touch With Us info@kalpa.news Whatsapp: 9481252093

















