No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಾಡಿನ ವಿವಿಧ ಕಡೆ ಹವ್ಯಕ ಮಹಾಸಭೆಯಿಂದ `ಸಂಸ್ಕಾರೋತ್ಸವ’ | ಡಾ.ಗಿರಿಧರ ಕಜೆ

82ನೆಯ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಪನ್ನ | ಡಾ.ಕಜೆ 11 ನೆಯ ಬಾರಿಗೆ ಪುನರಾಯ್ಕೆ

kalpa News by kalpa News
October 6, 2025
in Small Bytes
0
ನಾಡಿನ ವಿವಿಧ ಕಡೆ ಹವ್ಯಕ ಮಹಾಸಭೆಯಿಂದ `ಸಂಸ್ಕಾರೋತ್ಸವ’ | ಡಾ.ಗಿರಿಧರ ಕಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹವ್ಯಕ ಸಮಾಜ ಸಂಸ್ಕಾರ ಭರಿತ ಸಮಾಜವಾಗಿದ್ದು, ನಮ್ಮ ಸಂಸ್ಕೃತಿ – ಸಂಸ್ಕಾರಗಳನ್ನು ಮುಂದಿನ ತಲೆಮಾರಿಗೆ ದಾಟಿಸಲು ಮಹಾಸಭೆಯಿಂದ ‘ಸಂಸ್ಕಾರೋತ್ಸವ’ವನ್ನು ಆಯೋಜಿಸಲಾಗಿದ್ದು, ನಾಡಿನ ವಿವಿಧ ಪ್ರಾಂತ್ಯಗಳಲ್ಲಿ ಸಂಸ್ಕಾರೋತ್ಸವವನ್ನು ಆಯೋಜಿಸಲಾಗುವುದು ಎಂದು ಡಾ. ಗಿರಿಧರ ಕಜೆ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆದ ಅಖಿಲ ಹವ್ಯಕ ಮಹಾಸಭೆಯ 82ನೆಯ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ತೃತೀಯ ವಿಶ್ವ ಹವ್ಯಕ ಸಮ್ಮೇಳನ ಅಭೂತಪೂರ್ವ ಯಶಸ್ಸನ್ನು ಗಳಿಸಿದ್ದು, ನಾಡಿನ ಮೂಲೆಮೂಲೆಗಳಲ್ಲಿ ಸಮ್ಮೇಳನದ ಕುರಿತಾಗಿ ಪ್ರತಿಕ್ರಿಯೆ ಇಂದಿಗೂ ವ್ಯಕ್ತವಾಗುತ್ತಿದೆ. ಸಮಾಜ ಸಂಘಟಿತವಾದಾಗ ಶಕ್ತಿಯುತವಾಗಲು ಸಾಧ್ಯ. ಹವ್ಯಕ ಮಹಾಸಭೆಯ ಸಮಾಜಮುಖೀ ಕಾರ್ಯಗಳಿಗೆ ಸಮಾಜದಿಂದ ಉತ್ತಮ ಪ್ರತಿಸ್ಪಂದನೆ ವ್ಯಕ್ತವಾಗುತ್ತಿದ್ದು, ಬೇರೆ ಸಮಾಜದವರೂ ಕೂಡ ನಮ್ಮ ಸಮಾಜದ ಕಾರ್ಯಕ್ಕೆ ಅಯಾಚಿತವಾಗಿ ಸಹಕಾರ ನೀಡುತ್ತಿದ್ದಾರೆ. ಮಹಾಸಭೆಯ ಸಮಾಜೋತ್ಥಾನದ ಕಾರ್ಯಗಳನ್ನು ನಾಡಿನ ಬೇರೆ ಬೇರೆಬೇರೆ ಜನರೂ ಗುರುತಿಸುತ್ತಿದ್ದಾರೆ ಎಂದರು.

ಹವ್ಯಕರು ಪ್ರಮುಖವಾಗಿ ನೆಲೆಸಿರುವ ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಭಾಗಗಳಲ್ಲಿ ಸ್ಥಳೀಯವಾಗಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಂಘಟಿತರಾಗಲು ಪ್ರಯತ್ನ ಪಡಬೇಕಿದೆ. ಈ ದಿಶೆಯಲ್ಲಿ ಸಿದ್ದಾಪುರ, ಶಿರಸಿ ಮುಂತಾದ ಪ್ರದೇಶದಲ್ಲಿ ಮಹಾಸಭೆಯ ಪ್ರಾದೇಶಿಕ ಕೇಂದ್ರ ಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ತಿಳಿಸಿದರು.ಪ್ರಧಾನ ಕಾರ್ಯದರ್ಶಿ ಸಿ.ಎ. ವೇಣು ವಿಘ್ನೇಶ ಸಂಪ ಸಭೆಯನ್ನು ನಡೆಸಿ; ಸದಸ್ಯರ ಪ್ರಶ್ನೆಗಳಿಗೆ ಸಮಜಾಯಿಷಿ ನೀಡಿ, ಮಹಾಸಭೆಯ ಕಾರ್ಯಗಳಿಗೆ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ನೀಡುತ್ತಿರುವ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದರು.

ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಆಯವ್ಯಯ ಮಂಡಿಸಿ; ಖರ್ಚು ವೆಚ್ಚಗಳ ಮಾಹಿತಿ ನೀಡಿದರು. ಮಹಾಸಭೆಯಲ್ಲಿ ಆರ್ಥಿಕ ಶಿಸ್ತಿಗಾಗಿ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು.

ಉಪಾಧ್ಯಕ್ಷ ಶ್ರೀಧರ ಭಟ್ಟ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ್ ಭಟ್ಟ ಮಲವಳ್ಳಿ, ಆದಿತ್ಯ ಕಲಗಾರು ಹಾಗೂ ಸಾಗರ, ಮಂಗಳೂರು, ಬೆಂಗಳೂರು, ಉತ್ತರ ಕನ್ನಡ, ಕಾಸರಗೋಡು ಸೇರಿದಂತೆ ಬೇರೆಬೇರೆ ಪ್ರಾಂತಗಳ ನಿರ್ದೇಶಕರು – ಸದಸ್ಯರು ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮೊದಲು ವಿವಿಧ ಪ್ರಾಂತ್ಯಗಳ 16 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲಾ 16 ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾದರು.

ಡಾ.ಕಜೆ 11ನೆಯ ಬಾರಿಗೆ ಪುನರಾಯ್ಕೆ
ಡಾ.ಗಿರಿಧರ ಕಜೆಯವರು ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ 11 ನೆಯ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು.

ನೂತನ ಆಡಳಿತ ಮಂಡಳಿ:
ಡಾ. ಗಿರಿಧರ ಕಜೆ – ಅಧ್ಯಕ್ಷರು
ಆರ್.ಎಂ. ಹೆಗಡೆ ಬಾಳೆಸರ – ಉಪಾಧ್ಯಕ್ಷರು
ಶ್ರೀಧರ ಜೆ. ಭಟ್ಟ ಕೆಕ್ಕಾರು – ಉಪಾಧ್ಯಕ್ಷರು
ಸಿ.ಎ. ವೇಣುವಿಘ್ನೇಶ ಸಂಪ – ಪ್ರಧಾನ ಕಾರ್ಯದರ್ಶಿ
ಪ್ರಶಾಂತ ಕುಮಾರ ಜಿ. ಭಟ್ಟ ಮಲವಳ್ಳಿ – ಕಾರ್ಯದರ್ಶಿ
ಆದಿತ್ಯ ಹೆಗಡೆ ಕಲಗಾರು – ಕಾರ್ಯದರ್ಶಿ
ಕೃಷ್ಣಮೂರ್ತಿ ಎಸ್. ಭಟ್ ಯಲಹಂಕ – ಕೋಶಾಧಿಕಾರಿ
ಇದೇ ಸಂದರ್ಭದಲ್ಲಿ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ಧೂರ್ ಶಾಸ್ತ್ರಿಯವರ ಜಯಂತಿಯನ್ನು ಜ್ಞಾಪಿಸುತ್ತಾ ಅವರ ಜೀವನಾದರ್ಶಗಳು ನಮಗೆ ದಾರಿ ದೀಪವಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಗ್ರಂಥಗಳಿಂದ ಆಯ್ದ ಭಾಗಗಳ ಪಠಣವನ್ನು ಮಾಡಲಾಯಿತು. ಭಗವದ್ಗೀತೆಯನ್ನು ಕು.ಅಧಿತ್ರಿ ರಾಘವೇಂದ್ರ (ಕೆ.ಎಸ್. ರಾಘವೇಂದ್ರರವರ ಸುಪುತ್ರಿ), ಬೈಬಲ್ ಅನ್ನು ಶಾಜಿ ಅಬ್ರಹಾಂ ಮತ್ತು ಕುರಾನ್ ಅನ್ನು ಕು. ರಿಯಾ ಅಂಜುಮ್ ಹಾಗೂ ಕು. ರಿನಾಜ್ ಅಂಜುಮ್ (ರಿಜ್ವಾನ್ ಬೇಗ್ ಅವರ ಪುತ್ರಿಯರು) ಪಠಿಸಿದರು. ಕುಮಾರಿ ಅಧಿತ್ರಿ ರಾಘವೇಂದ್ರ ರಘುಪತಿ ರಾಘವ ಭಜನೆಯನ್ನು ಸುಶ್ರಾವ್ಯವಾಗಿ ಹಾಡಿ ಎಲ್ಲರೂ ಸಹ ಭಜನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು.

2025-26ನೆಯ ಸಾಲಿನ ಆಡಳಿತ ಮಂಡಳಿಯ ನಾಮಾಂಕಿತ ನಿರ್ದೇಶಕರು

  • ರಾಮಕೃಷ್ಣ ಭಟ್ಟ ಕುಕ್ಕಜೆ (ಬೆಂಗಳೂರು )
  • ಶಶಾಂಕ ಶಾಂತರಾಮ ಹೆಗಡೆ (ಶಿರಸಿ)
  • ವಿದ್ಯಾಧರ ಗುರುಶಕ್ತಿ (ಹೊಸನಗರ)
  • ವಿನಾಯಕ ಭಟ್ಟ ಮುರೂರು (ಬೆಂಗಳೂರು )
  • ಆನಂದ ಭಟ್ (ಬೆಂಗಳೂರು )
  • ಡಾ. ಶಾರದಾಜಯ ಗೋವಿಂದ (ಬೆಂಗಳೂರು )
  • ಶ್ರೀಧರಕೆ.ಎನ್ (ಸಾಗರ)
  • ಜಿ. ಎಂ. ಭಟ್ಟ ಕಾಜಿನಮನೆ (ಸಿದ್ದಾಪುರ )
  • ವಿ. ಎಮ್. ಹೆಗಡೆ (ಕಾರವಾರ)
  • ಅರುಣ ಶ್ಯಾಮ್ (ಬೆಂಗಳೂರು )
  • ಮಂಜುನಾಥ ಹೆಗಡೆ (ಬೆಂಗಳೂರು)
  • ವಿಷ್ಣು ಭಟ್ಟ ಪಾದೇಕಲ್ಲು (ಉಡುಪಿ )
  • ಎನ್.ಆರ್. ಹೆಗಡೆ ರಾಘೋಣ (ಬೆಂಗಳೂರು)
  • ಕೆ. ಎನ್. ಮಂಜುನಾಥ ರಾವ್ (ಬೆಂಗಳೂರು )
  • ಪ್ರಸನ್ನ ಹೆಗಡೆ ಕೆರೆಕೈ (ಸಾಗರ)
  • ಎಲ್.ಆರ್. ಹೆಗಡೆ (ಬೆಂಗಳೂರು)

ಅವಿರೋಧವಾಗಿ ಆಯ್ಕೆಯಾದ ವಿವಿಧ ಪ್ರಾಂತ್ಯಗಳ 16 ನಿರ್ದೇಶಕರು

ಬೆಂಗಳೂರು ಕ್ಷೇತ್ರ
1. ಮುರಳಿ ಕೃಷ್ಣ ಕುಕ್ಕುಪುಣಿ
2. ಪ್ರಶಾಂತಕುಮಾರ ಭಟ್
3. ಕೃಷ್ಣಮೂರ್ತಿ ಶ್ರೀಧರ ಭಟ್
4. ಆದಿತ್ಯ ಹೆಗಡೆ

ಉತ್ತರ ಕನ್ನಡ ಕ್ಷೇತ್ರ
1. ಪ್ರಶಾಂತ ಹೆಗಡೆ
2. ಅರುಣ ನಾರಾಯಣ ಹೆಗಡೆ

ಶಿವಮೊಗ್ಗ ಕ್ಷೇತ್ರ
1. ಗಣಪತಿ ಭಟ್ಜೆ. ವಿ.
2. ಡಾ. ಮೈಥಿಲಿ ಸಿ.

ದಕ್ಷಿಣ ಕನ್ನಡ ಕ್ಷೇತ್ರ
1. ಬಿ. ಶಿವಶಂಕರ ಭಟ್
2. ಎ.ಎನ್. ರವಿಶಂಕರ
3. ಕೂಡೂರು ರಾಮಚಂದ್ರ ಭಟ್
4. ಪುರೋಹಿತ ನಾಗರಾಜ ಭಟ್
5. ಕೆ. ಈಶ್ವರ ಭಟ್

ಹಾಸನ-ಚಿಕ್ಕಮಗಳೂರು ಕ್ಷೇತ್ರ
1. ಜಿ. ರಾಜಗೋಪಾಲ ಜೋಷಿ

ಕರ್ನಾಟಕ ಇತರೆ ಪ್ರದೇಶ
1. ಶ್ರೀಕಾಂತ ಭಟ್

ಹವ್ಯಕ ಸಂಘ- ಸಂಸ್ಥೆಗಳಿಂದ
1. ಡಿ.ಎನ್. ಕೃಷ್ಣಮೂರ್ತಿ (ಹವೀಕ ಸಂಘ (ರಿ) ಮೈಸೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: BENGALURUDr Giridhar KajeHavyaka BrahminHavyaka Maha MandalaHavyaka MahasabhaKannada News WebsiteLatest News KannadaShimogaShivamoggaShivamogga NewsSirsiಅಖಿಲ ಹವ್ಯಕ ಮಹಾಸಭೆಬೆಂಗಳೂರುಶಿರಸಿಸಂಸ್ಕಾರೋತ್ಸವಸಿದ್ದಾಪುರಹವ್ಯಕ ಭವನಹವ್ಯಕ ಸಮಾಜ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಆರಂಭವಾದ ಈ ಗೋಸೇವೆ ರಾಜ್ಯಕ್ಕೇ ವಿಸ್ತಾರವಾಗಲಿ | ಈಶ್ವರಪ್ಪ ಆಶಯ

Next Post

ಜೈಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಆರು ರೋಗಿಗಳ ದಾರುಣ ಸಾವು

kalpa News

kalpa News

Next Post
ಜೈಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಆರು ರೋಗಿಗಳ ದಾರುಣ ಸಾವು

ಜೈಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಆರು ರೋಗಿಗಳ ದಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL