ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕೆಲವು ವರ್ಗಕ್ಕೆ ಮಾತ್ರ ಸೀಮಿತವಾಗಿದ್ದ ಶಿಕ್ಷಣವನ್ನು ಸರ್ವರಿಗೂ ಸಿಗುವಂತೆ ಮಾಡಿದ ಕೀರ್ತಿ ಸಾವಿತ್ರಿಬಾಯಿ ಫುಲೆ ಅವರಿಗೆ ಸಲ್ಲುತ್ತದೆ. ಇದಕ್ಕಾಗಿ ಅವರು ಪಟ್ಟ ಶ್ರಮ ಸ್ಮರಣೀಯ ಎಂದು ಶಾಲಾ ಪ್ರಾಚಾರ್ಯ ಪಿ. ವಿಶ್ವನಾಥ ತಿಳಿಸಿದರು.
ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿ ಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
Also Read>> SRN ಕಾಲೇಜಿನಲ್ಲಿ ಸುಗ್ಗಿ | ಹೇಗಿತ್ತು ಎಳ್ಳು ಬೀರಿದ ವಿದ್ಯಾರ್ಥಿಗಳ ಸಂಭ್ರಮ?
ದೇಶದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆ ಆರಂಭಿಸುವ ಮೂಲಕ ಮಹಿಳಾ ಶಿಕ್ಷಣ ಪದ್ಧತಿಗೆ ಸಾವಿತ್ರಿಬಾಯಿ ಫುಲೆ ಮುನ್ನುಡಿ ಬರೆದರು.
ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತ ಮಾಡಿದ ಕಾಲದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಪರಿಣಾಮ ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿ ಸಾಧನೆ ಮಾಡಲು ಕಾರಣವಾಗಿದೆ ಎಂದರು.
ಪ್ರತಿಯೊಬ್ಬರು ಎನಾದರೂ ಸಾಧನೆ ಮಾಡಬೇಕಾದರೆ ಬೌದ್ಧ ಧರ್ಮದ ಮೂರು ತತ್ವಗಳನ್ನು ಅನುಸರಿಸಬೇಕು ಅವುಗಳೆಂದರೆ ಬುದ್ದಿವಂತರ, ಧರ್ಮದ ದಾರಿಯಲ್ಲಿ ಮತ್ತು ಉತ್ತಮವರ ಸಂಘವನ್ನು ಮಾಡಬೇಕು ಎಂದು ಹೇಳಿದರು.
ಚಂದ್ರಮತಿಯವರು ಮಾತನಾಡಿ, ತೊಟ್ಟಿಲು ತೂಗುವ ಕೈಗಳು ದೇಶವನ್ನು ಮುನ್ನಡೆಸುತ್ತವೆ ಎಂಬ ಘೋಷಣೆಯೊಂದಿಗೆ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣ ವ್ಯವಸ್ಥೆ ಜಾರಿಗಾಗಿ ಸಾಕಷ್ಟು ಹೋರಾಟ ಮಾಡಿದರು. ಪ್ರತಿವರ್ಷ ಫುಲೆ ಅವರ ಜನ್ಮದಿನವನ್ನು ಶಿಕ್ಷಕಿಯರ ದಿನವನ್ನಾಗಿ ಆಚರಿಸಿದಲ್ಲಿ ಹೆಚ್ಚಿನ ಅರ್ಥ ಸಿಗಲಿದೆ ಎಂದು ಹೇಳಿದರು.ಶಿಕ್ಷಕರಾದ ನಿಂಗಪ್ಪ ಅವರು ಸಾವಿತ್ರಿಬಾಯಿ ಫುಲೆ ಅವರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತೆ ಸಾವಿತ್ರಿಬಾಯಿ ಫುಲೆರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮೂರನೆಯ ರೂಪಣಾತ್ಮಕ ಪರೀಕ್ಷೆಯಲ್ಲಿ ತರಗತಿವಾರು ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪದಕಗಳನ್ನು ಕೊಡುವುದರ ಮೂಲಕ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೀಪ ಸ್ವಾಗತಿಸಿ, ರೇಖಾ ವಂದಿಸಿದರು. ವಿದ್ಯಾ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post