ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನ.3ರ ಇಂದು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಅಧಿಕ ಮಳೆ ಬೀಳುವ ಮುನ್ಸೂಚನೆ ಇದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 1-10ನೇ ತರಗತಿವರೆಗೂ ಎಲ್ಲ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಆರೆಂಜ್ ಅಲರ್ಟ್
ಇನ್ನು ಫೆಂಗಲ್ ಚಂಡ ಮಾರುತದ ಅಬ್ಬರ ಮಲೆನಾಡು ಜಿಲ್ಲೆಗಳಲ್ಲೂ ಅಬ್ಬರಿಸುವ ಮುನ್ಸೂಚನೆಯಿದ್ದು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ಇಂದು ಮುಂಜಾನೆಯ ಮಾಹಿತಿಯಂತೆ ನ.3ರ ಇಂದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post