ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಬಸ್ ಚಾಲಕ ಹಾಗೂ ಕೆಲ ಮಕ್ಕಳು ಸಣ್ಣಪುಟ್ಟ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಖಾಸಗಿ ಶಾಲೆಯೊಂದರ ಬಸ್ ಸಕ್ರೆಬೈಲ್ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಎದುರಿನಿಂದ ಲಾರಿಯೊಂದು ಅಡ್ಡ ಬಂದಿದ್ದು, ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ರಸ್ತೆ ಬದಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.
Also read>> ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ರಾಘವೇಶ್ವರ ಶ್ರೀ
ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








