ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕಳೆದ ನಾಲ್ಕೈದು ದಿನದಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲ ಬಿಇಒಗಳು ತಮ್ಮ ವ್ಯಾಪ್ತಿಯಲ್ಲಿ ಇಂದು ರಜೆ ಘೋಷಣೆ ಮಾಡಿದ್ದಾರೆ.
ಇನ್ನು ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ನಾಲ್ಕೈದು ದಿನಗಳಿಂದ ಹೆಚ್ಚಾಗಿದ್ದು, ನಿರಂತರವಾಗಿ ಸುರಿಯುತ್ತಲೇ ಇದೆ. ಸೊರಬ, ಹಾಗೂ ಶಿಕಾರಿಪುರ, ಭದ್ರಾವತಿ ನಗರಗಳಲ್ಲೂ ಉತ್ತಮ ಮಳೆಯಾಗುತ್ತಿದ್ದು ರೈತರ ಬಿತ್ತನೆ ಕಾರ್ಯ ಬರದಿಂದ ಸಾಗಿದೆ.
Discussion about this post