ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಈ ಕುರಿತಂತೆ ಮಾತನಾಡಿರುವ ಅವರು, ಶಾಲೆ ಪುನರ್ ಆರಂಭಿಸುವ ಸಂಬಂಧ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಶಾಲೆಯ ಆರಂಭಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಚರ್ಚೆ ಅಗತ್ಯವಿದೆ ಎಂದರು.
ಶಾಲಾ ಕಾಲೇಜುಗಳನ್ನು ಪುನರ್ ಆರಂಭಿಸುವ ಕುರಿತಾಗಿ ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಇಂತಹ ನಿರ್ಧಾರ ಕೈಗೊಳ್ಳುವ ಮುನ್ನ ಬಹಿರಂಗವಾಗಿ ಅಭಿಪ್ರಾಯ ಸಂಗ್ರಹ ಮಾಡಿಯೇ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ ಎಂದರು.
Get In Touch With Us info@kalpa.news Whatsapp: 9481252093
Discussion about this post