ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬೆಂಗಳೂರಿನಿಂದ ಆಗಮಿಸಿದ್ದ ಮಹಿಳೆಯೋರ್ವರಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಗರದ ರಂಗಪ್ಪ ಸರ್ಕಲ್’ನಿಂದ ಹೊಳೆಹೊನ್ನೂರು ಕ್ರಾಸ್’ವರೆಗಿನ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ಸೋಮವಾರ ಈ ಪ್ರದೇಶಕ್ಕೆ ಬೆಂಗಳೂರಿನಿಂದ ಆಗಮಿಸಿದ್ದ ಗರ್ಭಿಣಿಯೋರ್ವರು ಮಂಗಳವಾರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಆಗಮಿಸಿದ್ದ ಪ್ರದೇಶವನ್ನು ಇಂದು ಸೀಲ್ ಡೌನ್ ಮಾಡಲಾಗಿದೆ.
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ನಗರಸಭೆ ಆಯುಕ್ತ ಮನೋಹರ್, ಇಂದು ಮುಂಜಾನೆ ಸೀಲ್ ಡೌನ್ ಮಾಡಲಾದ ನಂತರ ಇಡಿಯ ಪ್ರದೇಶವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 14 ದಿನಗಳ ಕಾಲ ಈ ಪ್ರದೇಶವನ್ನು ಸೀಲ್’ಡೌನ್ ಮಾಡಲಾಗಿದ್ದು, ಇಲ್ಲಿನ ಯಾರ ಓಡಾಟಕ್ಕೂ ಸಹ ಅವಕಾಶವಿರುವುದಿಲ್ಲ ಎಂದಿದ್ದಾರೆ.
ಇನ್ನು, ಈ ಪ್ರದೇಶದಲ್ಲಿನ ನಿವಾಸಿಗಳಿಗೆ ಎಲ್ಲ ರೀತಿಯ ಅಗತ್ಯ ವಸ್ತುಗಳನ್ನು ನಗರಸಭೆ ವತಿಯಿಂದಲೇ ಪ್ರತಿನಿತ್ಯ ಸರಬರಾಜು ಮಾಡಲಾಗುವುದು. ಪ್ರತಿದಿನವೂ ಸಹ ಒಂದು ಬಾರಿ ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಹಣ ಕೊಟ್ಟು ಖರೀದಿ ಮಾಡಬಹುದು ಎಂದು ತಿಳಿಸಿದರು.
Get In Touch With Us info@kalpa.news Whatsapp: 9481252093
Discussion about this post