ಬೆಂಗಳೂರು: 2018-19ನೆಯ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಉಡುಪಿ ಪ್ರಥಮ ಸ್ಥಾನ ಗಳಿಸಿದೆ.
ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್.ಆರ್. ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಚಿತ್ರದುರ್ಗ ಕೊನೆಯ ಸ್ಥಾನವನ್ನು ಪಡೆದಿದೆ.
ಶೇ. 92.20 ಅಂಕಗಳನ್ನು ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.90.91 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಕೊಡಗು ಶೇ. 83.31ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶೇ.51.42 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ರಾಜ್ಯದ 98 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ 80 ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. 4,17,573 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೇ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.
ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ಈ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿದೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.
Discussion about this post