ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿಯಾದ ಬೆನ್ನಲ್ಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಠಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಎ.21ರ ಇಂದು ರಾತ್ರಿಯಿಂದ ಮೇ 4ರವರೆಗೂ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಸೆಕ್ಷನ್ ಜಾರಿಗೊಳಿಸಿದ್ದಾರೆ.
ಒಂದು ವೇಳೆ ಈ ಆದೇಶವನ್ನು ಯಾರಾದರೂ ಉಲ್ಲಂಘಿಸಿದರೆ ಐಪಿಸಿ ಸೆಕ್ಷನ್ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60 ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post