No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೊಬೈಲ್ ಫೋನ್ ಬಳಕೆಗೆ ಮಿತಿಯಿರದೇ ಇದ್ದಲ್ಲಿ ಎಷ್ಟೆಲ್ಲಾ ಅನಾಹುತಗಳಿವೆ ನೋಡಿ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2019
in Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಈ ಮಾಯಾ ಜಗತ್ತು ಎಷ್ಟೊಂದು ಸುಂದರ…! ಕುಳಿತ ಜಾಗದಲ್ಲೇ ನಮ್ಮನ್ನು ಕುಳಿತುಕೊಳ್ಳುವಂತೆ ಮಾಡುವ, ದೂರ ಸರಿದರೂ ಮತ್ತೆ ಮತ್ತೆ ತನ್ನ ಬಳಿಯೆ ಉಳಿಯುವಂತೆ ಮಾಡುವ, ದಿನ ಪೂರ್ತಿ ಊಟ, ನಿದ್ದೆ, ಸ್ನಾನ ಹೀಗೆ ಎಲ್ಲಾ ಕೆಲಸಗಳನ್ನು ಬಿಟ್ಟು ಸುಮ್ಮನೆ ಒಂದೆಡೆ ಮೂಲೆಗೊರಗಿ ಕುಳಿತುಕೊಳ್ಳುವಂತೆ ಮಾಡುವ ಮಾಂತ್ರಿಕ ಶಕ್ತಿ ಹೊಂದಿರುವ ಮಾಯೆ ಈ ಮೊಬೈಲು.

ಇಂದಿನ ವೈಜ್ಞಾನಿಕ ಯುಗದಲ್ಲಿ ಮೊಬೈಲ್, ಸ್ಮಾರ್ಟ್‌ಪೋನ್, ಐಪ್ಯಾಡ್, ಲ್ಯಾಪ್’ಟಾಪ್ ಮತ್ತು ಕಂಪ್ಯೂಟರ್‌ನಂತಹ ವಿನೂತನ ಅತ್ಯಾಧುನಿಕ ವಿದ್ಯುನ್ಮಾನ ಸಾಧನಗಳು ಕೈಲಿದ್ದರೆ ಸಾಕು ಇಡೀ ಜಗತ್ತೇ ನಮ್ಮ ಅಂಗೈಯಲ್ಲಿ. ನಮಗೆ ಅಗತ್ಯವಿರುವ ಎಲ್ಲಾ ಬಗೆಯ ವಿಷಯ, ಜ್ಞಾನ, ಮಾಹಿತಿ, ಸಂಗೀತ, ಮನೋರಂಜನೆ, ಸುದ್ದಿ, ಕ್ರೀಡೆ, ಸಂಪರ್ಕ, ಸಂದೇಶಗಳಂತಹ ತರಹೇವಾರಿ ಮಾಹಿತಿಗಳನ್ನು ಪಡೆಯುವುದರ ಜೊತೆಗೆ ಮಾನಸಿಕ ನೆಮ್ಮದಿ ನೀಡಿ ಮನಸ್ಸನ್ನು ಪುಳಕಗೊಳಿಸಬಲ್ಲ ಸಂಗತಿಗಳನ್ನು ನಾವು ಈ ಮೊಬೈಲ್ ತಂತ್ರಜ್ಞಾನದಿಂದ ಪಡೆಯಬಹುದಾಗಿದೆ.

ಮೊಬೈಲ್ ಅಥವಾ ಸ್ಮಾಟ್’ಫೋನ್‌ನಿಂದ ಅವಶ್ಯಕ ಮಾಹಿತಿ, ಗೇಮ್, ಕಾರ್ಟೂನ್ ಮತ್ತು ಇನ್ನಿತರ ಮನಸಿಗೆ ಮುದನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜೊತೆಗೆ ಬೌದ್ಧಿಕ ವಿಕಾಸ ಹಾಗೂ ಕಲಿತ ವಿದ್ಯೆಯನ್ನು ಒರೆಗೆ ಹಚ್ಚುವಲ್ಲಿಯೂ ಇದು ಸಹಾಯಕವಾಗಿದೆ. ನಾವು ಸ್ಮಾರ್ಟ್‌ಫೋನ್‌ನಂತೆ ಸ್ಮಾರ್ಟ್ ಕೂಡ ಆಗಬಹುದೆಂಬುದೇನೋ ನಿಜ. ಆದರೆ, ಮಕ್ಕಳು ಬಳಸುವ ಮೊಬೈಲ್ ಮತ್ತು ಸ್ಮಾರ್ಟ್‌ಫೋನ್‌ಗಳು ಎಷ್ಟರ ಮಟ್ಟಿಗೆ ಸುರಕ್ಷಿತ ಮತ್ತು ಅವುಗಳಿಂದ ಆಗಬಹುದಾದ ದುಷ್ಟರಿಣಾಮಗಳ ಅರಿವಿಲ್ಲದೆ ಮೌನವಾಗಿರುವುದು ಅಪಾಯದ ಮುನ್ಸೂಚನೆಯೇ ಸರಿ.

ಇಂದಿನ ನಮ್ಮ ಬದುಕು ಮೊಬೈಲ್ ಮಯವಾಗುತ್ತಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಹಿಂದಿನ ಕಾಲದಲ್ಲಿ ಮಕ್ಕಳಿಗೆ ಚಂದಮಾಮ ತೋರಿಸಿ, ಲಾಲಿ ಹಾಡಿ ಊಟ ಮಾಡಿಸುತ್ತಿದ್ದರು. ಆದರೆ ಇಂದಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಇಲ್ಲದೆ ಊಟ ಮಾಡುವುದಿಲ್ಲ ಎನ್ನುವಷ್ಟರ ಮಟ್ಟಿಗೆ ಮೊಬೈಲ್ ಎಂಬ ಮಾಯೆ ತನ್ನ ಪ್ರಭಾವ ಬೀರಿರುವುದು ಅತ್ಯಂತ ಕಳವಳಕಾರಿ ಸಂಗತಿ.

ನಿರಂತರವಾಗಿ ಮೊಬೈಲ್ ಬಳಸುವುದರಿಂದ ಮಕ್ಕಳು ಭವಿಷ್ಯದಲ್ಲಿ ಎದುರಿಸಬಹುದಾದ ಸಮಸ್ಯೆಗಳ ಕುರಿತು ಪೋಷಕರು ಕಿಂಚಿತ್ತು ಗಮನಹರಿಸಿದರೆ ಒಳಿತು. ಪಬ್’ಜಿ ಗೇಮ್, ಟಿಕ್’ಟಾಕ್, ಸಾಮಾಜಿಕ ಜಾಲತಾಣ, ಆತಂಕಕಾರಿ ಸಾಫ್ಟ್‌’ವೇರ್‌ಗಳು ಹಾಗೂ ಇನ್ನಿತರ ಅಶ್ಲೀಲ ಸಂಗತಿಗಳು ಮಕ್ಕಳ ಕೋಮಲವಾದ ಮನಸ್ಸುನ್ನು ಕೆರಳಿಸಿ, ಪ್ರಚೋದಿಸಿ ಅವರ ಗಮನ ಕೇಂದ್ರೀಕರಿಸಿಕೊಂಡು ಕೊನೆಗೆ ಜೀವಹಾನಿಯಂತಹ ಘಟನೆಗಳು ಸಂಭವಿಸುತ್ತಿರುವುದು, ವೈಚಾರಿಕ ನೆಲೆಯಿಂದ ವಿಮುಖರಾಗಿ ಕ್ರೌರ್ಯಗಳಿಗೆ, ದುಷ್ಕೃತ್ಯಗಳಿಗೆ ಕಾರಣವಾಗುತ್ತಿರುವುದು ಮೊಬೈಲ್ ಬಳಸುವ ಎಲ್ಲರಿಗೂ ತಿಳಿದ ಸಂಗತಿಯೇ ಆಗಿದೆ.

ಅತಿಯಾದ ಸ್ಮಾರ್ಟ್’ಫೋನ್’ ಬಳಕೆಯಿಂದ ಮಕ್ಕಳ ಕಲಿಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿ ಕಲಿಕೆ, ಫಲಿತಾಂಶ ಕುಂಠಿತವಾಗುವ ಆತಂಕವಿದೆ. ಪ್ರೀತಿ, ವಾತ್ಸಲ್ಯ, ಮಮತೆ, ಜೀವನ, ಸಂಬಂಧ ಮತ್ತು ಮೌಲ್ಯಗಳ ಪರಿವೆಯೇ ಇಲ್ಲದೇ ಬದುಕುವ ಪರಿಸ್ಥಿತಿ ತಂದೊಡ್ಡಿದೆ.
ದೊಡ್ಡವರು ಮಕ್ಕಳ ಮುಂದೆ ಮೊಬೈಲ್ ಬಳಸುವುದನ್ನು ಕಡಿಮೆ ಮಾಡಿ, ಮಕ್ಕಳ ಬದುಕಿಗೆ ಮಾದರಿಯಾಗಬೇಕು. ನಮ್ಮ ಮಕ್ಕಳ ಭವಿಷ್ಯವನ್ನು ನಾವು ಮಾತ್ರವೇ ಬದಲಾಯಿಸಬಹುದು ಎಂಬುದನ್ನು ಅರಿತು ಜಾಗೃತರಾಗಬೇಕು.

ಮಕ್ಕಳನ್ನು ಮೊಬೈಲ್’ನಿಂದ ದೂರವಿರಿಸುವುದು ಇಂದು ಕಷ್ಟದ ಕೆಲಸ. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಬೆಳವಣಿಗೆ ಕುಂಠಿತವಾಗಬಹುದು ಎಂದು ಅಧ್ಯಯನಗಳು ತಿಳಿಸಿವೆ.

ಮೊಬೈಲ್’ನಿಂದಾಗುವ ದುಷ್ಟರಿಣಾಮಗಳು ಹದಿಹರೆಯದ ಮತ್ತು ಯೌವ್ವನಾವಸ್ಥೆಯಲ್ಲಿರುವವರ ಆಲೋಚನಾ ಶಕ್ತಿ ಕುಗ್ಗಲು ಹಾಗೂ ಕ್ಷೀಣಿಸಲು ಮೊಬೈಲ್ ಕಾರಣವಾಗಿದೆ.

ಪಬ್’ಜಿ ಗೇಮ್’ನಂತಹ ಆವೇಶಭರಿತ ಆಟಗಳ ನಿಯಂತ್ರಣಕ್ಕೊಳಪಟ್ಟು ಕೊನೆಗೆ ಆಟದಲ್ಲಿ ಸೋತ ಮಕ್ಕಳು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಇದರಿಂದ ಮಕ್ಕಳ ಕಣ್ಣು, ಮೆದುಳು ಮತ್ತು ವಿವಿಧ ಶಾರೀರಿಕ ಬೆಳವಣಿಗೆಯ ಮೇಲೆ ಆರೋಗ್ಯದ ಅಡ್ಡ ಪರಿಣಾಮಗಳು ಆಗುತ್ತಿವೆ. ನಿರಂತರ ಮೊಬೈಲ್ ಬಳಕೆಯಿಂದ ರಕ್ತದೊತ್ತಡ ಮತ್ತು ನರರೋಗಕ್ಕೆ ತುತ್ತಾಗುವ ಸಾಧ್ಯತೆಗಳು ಇರುವುದನ್ನು ಇತ್ತೀಚಿನ ಸಂಶೋಧನೆಗಳು ದೃಢಪಡಿಸಿವೆ.

ನಿದ್ದೆ ಮಾಡೋಲ್ಲ ಮತ್ತು ಹೇಳಿದ ಮಾತು ಕೇಳೊಲ್ಲ ಎಂದರೆ ನಾವು ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಗೊಂಬೆಗಳ ಕಾರ್ಯಕ್ರಮ ಮತ್ತು ಗೇಮ್ ಆಡುವುದಕ್ಕೆ ಹೇಳಿ ಸುಮ್ಮನಾಗಿಸುತ್ತೇವೆ. ತಾಂತ್ರಿಕತೆ ಮತ್ತು ತಂತ್ರಜ್ಞಾನ ಯುಗದತ್ತ ಮುಖ ಮಾಡುತ್ತಿರುವ ನಾವು ನಮ್ಮ ಕಾರ್ಯಬಾಹುಳ್ಯದ ಒತ್ತಡದಿಂದಾಗಿ ಮಕ್ಕಳ ಕಡೆಗೆ ಗಮನ ಕೂಡಲು ಸಾಧ್ಯವಾಗುತ್ತಿಲ್ಲ. ಮೊಬೈಲ್ ಬಳಕೆಯಿಂದ ಹಲವಾರು ತೊಂದರೆಗಳು ಎದುರಾಗುತ್ತಿವೆ. ಹೀಗಾಗಿ ಮಕ್ಕಳ ಮನಸ್ಸು ಮತ್ತು ಆರೋಗ್ಯದ ಮೇಲೆ ಭೀಕರವಾದ ಪರಿಣಾಮ ಪರಿಣಾಮ ಬೀರುತ್ತಿವೆ.

ಮೊಬೈಲ್ ಫೋನ್’ಗಳು ಮತ್ತು ಅವುಗಳ ಟವರ್’ಗಳು ಹೊರಸೂಸುವ ತರಂಗಗಳು ಮಹಿಳೆಯರಲ್ಲಿ ಫಲವತ್ತತೆಯ ನಷ್ಟಕ್ಕೆ ಪ್ರಮುಖ ಕಾರಣವಾಗಿದೆ. ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಅಧ್ಯಯನವೊಂದು ತಿಳಿಸಿದೆ. ಮೊಬೈಲ್ ಫೋನ್’ಗಳ ನಿರಂತರ ಬಳಕೆಯು ಸದಾ ಪ್ರಶ್ನೆಯಲ್ಲಿದೆ. ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕುಸಿತ ಮತ್ತು ಮಹಿಳೆಯರಲ್ಲಿ ಫಲವತ್ತತೆ ಕುಂಠಿತ ಸೇರಿದಂತೆ ಮೊಬೈಲ್ ವಿಕಿರಣದ ದುಷ್ಪರಿಣಾಮಗಳನ್ನು ಹಲವಾರು ಅಧ್ಯಯನಗಳು ಮತ್ತು ಸಂಶೋಧನೆಗಳು ಬಹಿರಂಗಗೊಳಿಸಿವೆ. ಅಷ್ಟೇ ಅಲ್ಲ, ಮೊಬೈಲ್ ವಿಕಿರಣವು ಬ್ರೈನ್ ಟ್ಯೂಮರ್‌ಗಳನ್ನೂ ಉಂಟುಮಾಡುತ್ತದೆ ಎಂಬುದನ್ನು ಖಚಿತಪಡಿಸಿದೆ.

ಸ್ಮಾರ್ಟ್‌ಫೋನ್’ಗಳ ನಿರಂತರ ಬಳಕೆ ನಮ್ಮ ಪ್ರತಿದಿನ ಬದುಕಿನ ಭಾಗವಾಗಿಬಿಟ್ಟಿದೆ. ಆದರೆ ಮನಸ್ಸು ಮತ್ತು ಶರೀರದ ಮೇಲೆ ಅದರ ದುಷ್ಟಪರಿಣಾಮಗಳ ಬಗ್ಗೆಯೂ ಮೊಬೈಲ್ ಬಳಕೆದಾರರು ತಿಳಿದಿರಬೇಕು.

ಮೊಬೈಲ್ ಫೋನ್’ಗಳು ಹೊರಸೂಸುವ ವಿಕಿರಣಗಳು ಕ್ಯಾನ್ಸರ್’ನಂತಹ ಮಾರಣಾಂತಿಕ ಕಾಯಿಲೆಯನ್ನುಂಟು ಮಾಡುವ ಅಪಾಯವಿದೆ ಎನ್ನುವುದನ್ನು ಡಬ್ಲ್ಯುಎಚ್‌ಒ ಸಂಶೋಧನೆಯು ಬಹಿರಂಗಗೊಳಿಸಿದೆ. ಸೆಲ್ ಫೋನುಗಳನ್ನು ಬಳಸಿದ್ದ ಹಲವಾರು ಯುವಜನರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಿರುವುದನ್ನು ಹಂಗೇರಿಯ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಮೊಬೈಲ್ ಟವರ್’ನ 400 ಮೀಟರ್’ಗಳ ಪ್ರದೇಶದಲ್ಲಿರುವವರಲ್ಲಿ ಕ್ಯಾನ್ಸರ್ ಅಪಾಯದ ಸಂಭವನೀಯತೆ ಮೂರು ಪಟ್ಟು ಹೆಚ್ಚಾಗಿರುವುದನ್ನು ಜರ್ಮನಿಯಲ್ಲಿ ನಡೆಸಲಾದ ಸಂಶೋಧನೆಯೊಂದು ತೋರಿಸಿದೆ. ಈ 400 ಮೀಟರ್ ಪ್ರದೇಶದಲ್ಲಿ ಮೊಬೈಲ್ ಸಿಗ್ನಲ್’ಗಳ ಪ್ರಸರಣವು ಇತರ ಕಡೆಗಳಿಂದ 100 ಪಟ್ಟು ಹೆಚ್ಚಾಗಿರುತ್ತದೆ. ಮೊಬೈಲ್ ಫೋನ್ ಟವರ್’ಗಳಿಂದ ಹೊರಹೊಮ್ಮುವ ವಿಕಿರಣದಿಂದಾಗಿ ಜೇನುನೊಣಗಳ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎಂದು ಕೇರಳದಲ್ಲಿ ನಡೆಸಲಾದ ಸಂಶೋಧನೆಯೊಂದು ತಿಳಿಸಿದೆ.

ಸೆಲ್ ಫೋನ್ ಟವರ್‌ಗಳ ಸಮೀಪದಲ್ಲಿ ಕಾಗೆಗಳು ಇಡುವಂತಹ ಮೊಟ್ಟೆಗಳು 30 ದಿನಗಳ ಬಳಿಕವೂ ಮರಿಗಳಾಗಿಲ್ಲ. ಸಾಮಾನ್ಯವಾಗಿ 10ರಿಂದ 14 ದಿನಗಳಲ್ಲಿ ಮೊಟ್ಟೆಗಳು ಒಡೆದು ಮರಿಗಳು ಹೊರಗೆ ಬರುತ್ತವೆ ಎನ್ನುವುದನ್ನೂ ಅಧ್ಯಯನಗಳು ಸೂಚಿಸಿವೆ.

ಪೋನ್ ವಿಕಿರಣಗಳು ಆರೋಗ್ಯಕ್ಕೆ ಯಾವ ರೀತಿಯ ಅಪಾಯಗಳನ್ನು ಉಂಟುಮಾಡಬಹುದೆಂದು ತಿಳಿದರೆ ಅಚ್ಚರಿಯುಂಟಾಗದಿರದು. ಮೊಬೈಲ್ ಫೋನ್ ವಿಕಿರಣವು ತಲೆನೋವು, ತಲೆಯೊಳಗೆ ಜುಮ್ಮೆನಿಸುವಿಕೆ, ನಿರಂತರ ಬಳಲಿಕೆ, ತಲೆ ಸುತ್ತುವಿಕೆ, ಖಿನ್ನತೆ, ನಿದ್ರಾಹೀನತೆ, ಮಂಪರು ನಿದ್ರೆ, ಕಣ್ಣಿನ ತೊಂದರೆ, ಏಕಾಗ್ರತೆ ನಷ್ಟ, ಕಿವಿಗಳಲ್ಲಿ ಗಂಟೆ ಬಾರಿಸಿದ ಅನುಭವ, ಶ್ರವಣ ಶಕ್ತಿ ಮತ್ತು ಜ್ಞಾಪಕ ಶಕ್ತಿ ನಷ್ಟ, ಅಜೀರ್ಣ ಸಮಸ್ಯೆ, ಅನಿಯಮಿತ ಹೃದಯಬಡಿತ ಇತ್ಯಾದಿ ನೋವುಗಳಿಗೆ ಕಾರಣವಾಗುತ್ತದೆ.

ಮೊಬೈಲ್ ವಿಕಿರಣವು ಫಲವತ್ತತೆ ನಷ್ಟ, ಕ್ಯಾನ್ಸರ್, ಬ್ರೈನ್ ಟ್ಯೂಮರ್ ಮತ್ತು ಗರ್ಭಪಾತಕ್ಕೂ ಕಾರಣವಾಗುತ್ತವೆ ಎನ್ನುವುದನ್ನು ಸಂಶೋಧನೆಗಳು ತಿಳಿಸಿವೆ. ನಮ್ಮ ಶರೀರದಲ್ಲಿ ಶೇ.70ರಷ್ಟು ಭಾಗ ನೀರಿದೆ ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತು. ನಮ್ಮ ಮೆದುಳಿನ ಶೇ.90ರಷ್ಟು ಭಾಗವೂ ನೀರೇ ಆಗಿದೆ. ಈ ನೀರು ಕ್ರಮೇಣ ವಿಕಿರಣವನ್ನು ಹೀರಿಕೊಳ್ಳುತ್ತದೆ ಮತ್ತು ಇದು ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗಿದೆ. ಸದಾಕಾಲ ಮೊಬೈಲ್ ಫೋನ್ ಬಳಸುವವರು ಕ್ಯಾನ್ಸರ್’ಗೆ ಗುರಿಯಾಗುವ ಸಾಧ್ಯತೆಗಳಿರುತ್ತವೆ ಎಂದು ಡಬ್ಲ್ಯೂಎಚ್‌ಒ ವರದಿ ತಿಳಿಸಿದೆ.

1,000 ರಿಂದ 3,000 ಮೆಘಾ ಹರ್ಟ್‌್ಸ ಸಾಮರ್ಥ್ಯದವರೆಗಿನ ವಿದ್ಯುತ್ ಕಾಂತೀಯ ಅಲೆಗಳು ಮೈಕ್ರೊವೇವ್ ವಿಕಿರಣವನ್ನುಂಟು ಮಾಡುತ್ತದೆ. ಮೈಕ್ರೊವೇವ್ ಓವನ್, ಏರ್ ಕಂಡೀಷನರ್, ನಿಸ್ತಂತು ಕಂಪ್ಯೂಟರ್, ಕಾರ್ಡ್‌ಲೆಸ್ ಫೋನ್ ಮತ್ತು ಇತರ ವೈರ್’ಲೆಸ್ ಸಾಧನಗಳೂ ವಿಕಿರಣಗಳನ್ನು ಸೂಸುತ್ತವೆ. ಆದರೆ ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್ ಮತ್ತು ಮೊಬೈಲ್ ಬಳಕೆಯಿಂದ ಅದರ ಸಾಮೀಪ್ಯದಿಂದಾಗಿ ಮೊಬೈಲ್ ವಿಕಿರಣವು ಶರೀರಕ್ಕೆ ಅತ್ಯಂತ ಅಪಾಯಕಾರಿಯಾಗಿದೆ.

ಆಧುನಿಕತೆ ಮುಂದುವರೆದಂತೆ ನಮ್ಮ ಕೌಟುಂಬಿಕ ಮತ್ತು ಸಾಮಾಜಿಕ ಸಂಬಂಧಗಳು ಸಂಕೀರ್ಣವಾಗಿ ನಾಟಕೀಯತೆ, ಕೃತಕತೆ, ಸಮಯ ಸಾಧಕತನ, ಸ್ವಾರ್ಥಪರತೆ ಇತ್ಯಾದಿಗಳ ವಿಜೃಂಭಣೆಯನ್ನು ಈಗ ಎಲ್ಲೆಲ್ಲೂ ಕಾಣಬಹುದಾಗಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳು ಸೇರಿಕೊಂಡು ಕೌಟುಂಬಿಕ ವ್ಯವಸ್ಥೆಯ ಬೇರುಗಳನ್ನು ಅಲುಗಾಡಿಸಲಾರಂಭಿಸಿವೆ ಎಂದರೆ ತಪ್ಪಾಗಲಾರದು.


Get in Touch With Us info@kalpa.news Whatsapp: 9481252093

Tags: Brain TumorCancerKannada ArticleMobileMobile TowerPubg gameRadiationSandhya SihimogeSmart PhoneSpermWHOWorld Health Organizationಕ್ಯಾನ್ಸರ್ಪಬ್’ಜಿ ಗೇಮ್ಮೊಬೈಲ್ ಟವರ್ಮೊಬೈಲ್ ಫೋನ್ವಿಕಿರಣವಿಶ್ವ ಆರೋಗ್ಯ ಸಂಸ್ಥೆವೀರ್ಯಾಣುಸ್ಮಾರ್ಟ್ ಫೋನ್
Share210Tweet123Send
Previous Post

15 ಕ್ಷೇತ್ರಗಳ ಉಪಚುನಾವಣೆ: ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

Next Post

ಶಾಕಿಂಗ್! ನಿನ್ನೆ 43 ಮಂದಿಯನ್ನು ಬಲಿ ಪಡೆದ ಪ್ರದೇಶದಲ್ಲಿ ಮತ್ತೆ ಅಗ್ನಿ ಅವಘಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಕಿಂಗ್! ನಿನ್ನೆ 43 ಮಂದಿಯನ್ನು ಬಲಿ ಪಡೆದ ಪ್ರದೇಶದಲ್ಲಿ ಮತ್ತೆ ಅಗ್ನಿ ಅವಘಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL