ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ಮೆರವಣಿಗೆಯಲ್ಲಿ ತರಲಾಗುತ್ತಿದೆ.
ನೇರ ಪ್ರಸಾರ ನೋಡಿ:
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸಂಚಾರ ನಿರ್ಬಂಧಿಸಿ, ಜನರ ಓಡಾಟಕ್ಕೂ ಸಹ ಬಹಳಷು ನಿಷೇಧ ಹೇರಲಾಗಿದೆ. ಆದರೂ ಸಹ ಮಾರ್ಗದುದ್ದಕ್ಕೂ ಅಟಲ್ ಜೀ ಅವರ ಸಾವಿರಾರು ಅಭಿಮಾನಿಗಳು ಜಮಾಯಿಸಿ, ತಮ್ಮ ನೆಚ್ಚಿನ ನಾಯಕನಿಗೆ ನಮನ ಸಲ್ಲಿಸುತ್ತಿದ್ದಾರೆ.
ಇನ್ನು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯೊಂದಿಗೆ ಸಾಗುತ್ತಿದ್ದು, ವಂದೇ ಮಾತರಂ, ಅಟಲ್ ಜೀ ಅಮರ್ ರಹೇ ಎಂಬ ಘೋಷಣೆ ಕೂಗುತ್ತಿದ್ದಾರೆ.
Discussion about this post