ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜ್ ಅವರನ್ನು ನೇಮಕ ಮಾಡಲಾಗಿದೆ.
ಆಡಳಿತ ಹಿತದೃಷ್ಠಿಯಿಂದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಹಾಗೂ ಡಾ.ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಸೆಲ್ವಕುಮಾರ್ ಅವರು ಈವರೆಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದರು.
ಇನ್ನು, ಪೊನ್ನುರಾಜ್ ಅವರಿಗೆ ಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆಯ ಜೊತೆಗೆ ಕೆಪಿಸಿಎಲ್ ಎಂಡಿಯಾಗಿಯೂ ಹೆಚ್ಚುವರಿ ಹುದ್ದೆಯನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post