ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್(59) ಇಂದು ನಸುಕಿನಲ್ಲಿ ವಿಧಿವಶರಾಗಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, 1996ರಿಂದ ನಿರಂತರವಾಗಿ ಸಂಸದರಾಗಿ ಆಯ್ಕೆಯಾಗಿದ್ದರು.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅನಂತಕುಮಾರ್ ಕಳೆದ ಒಂದೂವರೆ ತಿಂಗಳಿನಿಂದ ತೀವ್ರವಾಗಿ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ನಸುಕಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಪಾರ್ಥಿವ ಶರೀರವನ್ನು ಖಾಸಗಿ ಆಸ್ಪತ್ರೆಯಿಂದ ಅವರ ನಿವಾಸ ಬಸವನಗುಡಿಯಲ್ಲಿರುವ ಸುಮೇರ ನಿವಾಸದಲ್ಲಿರಿಸಲಾಗಿತ್ತು. ಅಲ್ಲಿ ಅವರ ಬಂಧು-ಮಿತ್ರರು ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಗ್ಗೆ 9 ಗಂಟೆ ನಂತರ ಪಾರ್ಥೀವ ಶರೀರದ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇನ್ನು, ಬಿಜೆಪಿ ಮುಖಂಡ ಆರ್. ಅಶೋಕ್ ಮಾತನಾಡಿದ್ದು, ನಾಳೆ ಬೆಂಗಳೂರಿನ ಚಾಮರಾಮಪೇಟೆ ರುದ್ರಭೂಮಿಯಲ್ಲಿ ಸಂಸ್ಕಾರ ನಡೆಸಲು ಅವರ ಕುಟುಂಬಸ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿದೇಶಗಳ ಗಣ್ಯರೂ ಸಹ ಆಗಮಿಸುವ ಸಾಧ್ಯತೆಯಿವುದರಿಂದ ಸಂಸ್ಕಾರವನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
Discussion about this post